ಗುಣಮಟ್ಟದ ಶಿಕ್ಷಣಕ್ಕೆ ಚನ್ನಬಸವೇಶ್ವರ ಮಹಾವಿದ್ಯಾಲಯ ಹೆಸರುವಾಸಿ

1686390610206
Published on

ಮೈಸೂರು: ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮೂಲಕ ತಮಕೂರು ಜಿಲ್ಲೆಯ ಗುಬ್ಬಿಯಲ್ಲಿರುವ ಚನ್ನಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯ ಹೆಸರುವಾಸಿಯಾಗಿದೆ.

2001ರಲ್ಲಿ ಆರಂಭವಾದ ಈ ಮಹಾವಿದ್ಯಾಲಯವು ಮೂರು ಬಾರಿ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಭಾಜನವಾಗಿದೆ. 2014 ಹಾಗೂ 2016ರಲ್ಲಿ ಗ್ರಾಮೀಣ ಭಾಗದ ಅತ್ಯುತ್ತಮ ಎಂಜಿನಿಯರಿಂಗ್ ಸಂಸ್ಥೆ, 2018ರಲ್ಲಿ ಹೆಚ್ಚು ಭರವಸೆಯ ಎಂಜಿನಿಯರಿಂಗ್ ಸಂಸ್ಥೆ ಎಂಬ ಪ್ರಶಸ್ತಿಯನ್ನು ಚನ್ನಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯ ಮುಡಿಗೇರಿಸಿಕೊಂಡಿದೆ. ತುಮಕೂರು ಜಿಲ್ಲೆಯ 6 ಎಂಜಿನಿಯರಿಂಗ್ ಕಾಲೇಜುಗಳ ಪೈಕಿ ಈ ಸಂಸ್ಥೆ 2ನೇ ಸ್ಥಾನದಲ್ಲಿದೆ.
ಪ್ರತಿ ವರ್ಷ 70ಕ್ಕೂ ಹೆಚ್ಚು ಪ್ರತಿಷ್ಠಿತಿ ಕಂಪನಿಗಳಿಂದ ವಿದ್ಯಾಲಯದಲ್ಲಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗುತ್ತಿದೆ. ಈ ಮೂಲಕ ಸಾವಿರಾರು ವಿದ್ಯಾರ್ಥಿಗಳು ಉದ್ಯೋಗ ಪಡೆಯಲು ನೆರವಾಗುತ್ತಿದೆ.
ಸಂಸ್ಥೆಯು ಪ್ರತಿ ವರ್ಷ ಸಿಐಟಿ-ಸಿಎಟಿ ಪರೀಕ್ಷೆ ನಡೆಸುವ ಬಡ ಹಾಗೂ ಪ್ರತಿಭಾವಂತೆ ಏಳು ಮಂದಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಸೇರಿದಂತೆ ಸಂಪೂರ್ಣ ಉಚಿತವಾಗಿ ಶಿಕ್ಷಣ ನೀಡುತ್ತಿದೆ.

ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ವಿಜಯವಾಣಿ ಹಾಗೂ ದಿಗ್ವಿಜಯ ವಾಹಿನಿಯ ವತಿಯಿಂದ ಶನಿವಾರ ಮತ್ತು ಭಾನುವಾರ ಆಯೋಜಿಸಿರುವ ಎಜುಕೇಷನ್ ಎಕ್ಸ್‌ಪೋದಲ್ಲಿ ಚನ್ನಬಸವೇಶ್ವರ ಮಹಾವಿದ್ಯಾಲಯ ಸಹಾಯಕ ಪ್ರಾಧ್ಯಾಪಕ ಸುಹಾಸ್ ಹಾಗೂ ತಂಡ ಆಸಕ್ತರಿಗೆ ಮಾಹಿತಿ ನೀಡುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net