ಗುಣಮಟ್ಟದ ಶಿಕ್ಷಣಕ್ಕೆ ವಸತಿ ಶಾಲೆಗಳ ಕೊಡುಗೆ ಅಪಾರ

21arsph2ep
ಅರಸೀಕೆರೆಯಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಗಣ್ಯರು ಉದ್ಘಾಟಿಸಿದರು. ಎಚ್.ಎಸ್. ಚಂದ್ರಶೇಖರ್, ಸಾಹಿತಿ ಚಟ್ನಳ್ಳಿ ಮಹೇಶ್, ಶಿವಶಂಕರ್, ಪರಶಿವಮೂರ್ತಿ, ಯಶೋದಾ, ರವಿಚಂದ್ರ ಇತರರಿದ್ದರು.
Published on

ಅರಸೀಕೆರೆ: ಗುಣಮಟ್ಟದ ಶಿಕ್ಷಣಕ್ಕೆ ವಸತಿ ಶಾಲೆಗಳ ಕೊಡುಗೆ ಅಪಾರ ಎಂದು ಒಬಿಸಿ ಜಿಲ್ಲಾ ಕಲ್ಯಾಣಾಧಿಕಾರಿ ಎಚ್.ಎಸ್. ಚಂದ್ರಶೇಖರ್ ಹೇಳಿದರು.

ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ನಗರದ ಸಿಂಧು ಭವನದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ನಗರ ಹಾಗೂ ಗ್ರಾಮೀಣ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಸತಿ ಜತೆಗೆ ಉತ್ತಮ ಶಿಕ್ಷಣ ಕೊಡಿಸುವಲ್ಲಿ ಶಿಕ್ಷಕರು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆಯುತ್ತಿರುವುದು ನಿದರ್ಶನವಾಗಿದೆ. ವಸತಿ ಶಾಲೆಯಲ್ಲಿ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಹಿತಕಾಯಲು ಇಲಾಖೆ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ಹೇಳಿದರು.

ಸಾಹಿತಿ ಚಟ್ನಳ್ಳಿ ಮಹೇಶ್ ಮಾತನಾಡಿ, ಗುರುವಿನ ಗುಲಾಮನಾಗದ ಹೊರತು ದೊರೆಯದಣ್ಣ ಮುಕುತಿ ಎನ್ನುವ ನಾಣ್ಣುಡಿಯನ್ನು ವಿದ್ಯಾರ್ಥಿಗಳು ಪಾಲಿಸಬೇಕು. ಸಮಾಜವನ್ನು ತಿದ್ದುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂಬುದನ್ನು ಮರೆಯಬಾರದು ಎಂದು ಕಿವಿಮಾತು ಹೇಳಿದರು.

ವಿವಿಧ ಆಟೋಟಗಳಲ್ಲಿ ವಿಜೇತರಾದ 14 ವಸತಿ ಶಾಲೆಯ ಶಿಕ್ಷಕರಿಗೆ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ರಾಜ್ಯಾಧ್ಯಕ್ಷ ರವಿಚಂದ್ರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪರಶಿವಮೂರ್ತಿ, ಒಬಿಸಿ ಅಧಿಕಾರಿ ಯಶೋದಾ, ಶಿಕ್ಷಣ ಸಂಯೋಜಕ ಗಿರೀಶ್ ಸಂತೋಷ್, ಜಯಪ್ರಕಾಶ್, ಕಲ್ಪನಾ, ಶಂಕರ್, ಪ್ರಸನ್ನಕುಮಾರ್, ರಾಜಪ್ಪ ಸೇರಿದಂತೆ ಹಲವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net