ಗುಣಮಟ್ಟದ ಶಿಕ್ಷಣದಿಂದ ಉತ್ತಮ ಫಲಿತಾಂಶ

27-GPT-4
ಗುಂಡ್ಲುಪೇಟೆ ತಾಲೂಕಿನ ಗರಗನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಹೆಚ್ಚುವರಿ ಕೊಠಡಿಗಳನ್ನು ನಿರಂಜನಕುಮಾರ್ ಉದ್ಘಾಟಿಸಿದರು. ಮಹೇಶ್, ಮಾದಪ್ಪ, ಮಹದೇವಸ್ವಾಮಿ, ಶಾಂತಪ್ಪ, ಬಸವರಾಜು ಇದ್ದರು.
Published on

ಗುಂಡ್ಲುಪೇಟೆ: ತಾಲೂಕಿನ ಸರ್ಕಾರಿ ಶಾಲೆಗಳಿಗೆ ಅಗತ್ಯ ಸವಲತ್ತು ಒದಗಿಸುವ ಮೂಲಕ ಗುಣಮಟ್ಟದ ಶಿಕ್ಷಣ ದೊರಕುವಂತೆ ಮಾಡಿರುವುದರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುತ್ತಿದೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು.

ತಾಲೂಕಿನ ಗರಗನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಿರ್ಮಿಸಿದ ಹೆಚ್ಚುವರಿ ಕೊಠಡಿಗಳನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

ಈ ಹಿಂದೆ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಅಗತ್ಯವಾದ ಕೊಠಡಿಗಳು ಹಾಗೂ ಮೂಲ ಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗಿದ್ದರು. ಜಿಲ್ಲೆಯಲ್ಲಿ ತಾಲೂಕು ಅತ್ಯಂತ ಕಡಿಮೆ ಫಲಿತಾಂಶ ಪಡೆಯುತ್ತಿತ್ತು. ಆದರೆ ಎಲ್ಲ ಶಾಲಾ ಕಾಲೇಜುಗಳಿಗೆ ಅಗತ್ಯವಾದ ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಿ ಪೀಠೋಪಕರಣಗಳನ್ನು ಒದಗಿಸಿ ಕಲಿಕೆಗೆ ಪೂರಕ ಪರಿಸರ ಸೃಷ್ಟಿಸಿದ್ದರಿಂದ ಗುಣಮಟ್ಟದ ಶಿಕ್ಷಣ ದೊರಕುತ್ತಿದೆ. ಉತ್ತಮ ಫಲಿತಾಂಶವೂ ಬರುತ್ತಿದೆ. ವಿದ್ಯಾರ್ಥಿಗಳು ಇವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮಹೇಶ್, ಗರಗನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಾದಪ್ಪ, ಉಪಾಧ್ಯಕ್ಷ ಮಹದೇವಸ್ವಾಮಿ, ಸದಸ್ಯರಾದ ಮಂಜು, ಶಿವಮೂರ್ತಿ, ಮುಖಂಡರಾದ ಶಾಂತಪ್ಪ, ಬಸವರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net