

ವಿಜಯವಾಣಿ ಸುದ್ದಿಜಾಲ ಧಾರವಾಡ
ಉತ್ತಮ ಯೋಚನೆ ಮತ್ತು ಉತ್ತಮ ಯೋಜನೆ ನಮ್ಮನ್ನು ಯಶಸ್ವಿಗೊಳಿಸುತ್ತದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಉಪನ್ಯಾಸಕರು ಶೈಕ್ಷಣಿಕ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಬೇಕು. ಗುಣಾತ್ಮಕ ಶಿಕ್ಷಣಕ್ಕೆ ನಿರಂತರ ಅಧ್ಯಯನ ಅಗತ್ಯ ಎಂದು ಡಿಡಿಪಿಯು ಕೆ.ಪಿ. ಸುರೇಶ ಹೇಳಿದರು.
ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಹಾಗೂ ಪೂರ್ಣಾ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ವ್ಯವಹಾರ ಅಧ್ಯಯನ ಮತ್ತು ಇಂಗ್ಲಿಷ್ ಭಾಷಾ ಉಪನ್ಯಾಸಕರಿಗೆ ಇತ್ತೀಚೆಗೆ ಆಯೋಜಿಸಿದ್ದ ವಿಷಯಾಧಾರಿತ ಪುನಃಶ್ಚೇತನ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಡಾ. ಚಿನ್ನಪ್ಪ ಹಾದಿಮನಿ ಮಾತನಾಡಿ, ಸೃಜನಶೀಲ ಸಂಪನ್ಮೂಲ ವ್ಯಕ್ತಿಗಳಿಂದ ಶೈಕ್ಷಣಿಕ ಅಭಿವೃದ್ಧಿ ಸಾಧ್ಯ ಎಂದರು.
ಪೂರ್ಣಾ ಶಿಕ್ಷಣ ಸಂಸ್ಥೆಯ ನಿರ್ದೇಶಕ ಮಹೇಶ ಕೋಲ್ಹಾರ, ಪ್ರಾಚಾರ್ಯೆ ತೇಜಸ್ವಿನಿ ನಾರಾಯಣಕರ, ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಹನುಮಂತಪ್ಪ ಡಿ., ಪ್ರಧಾನ ಕಾರ್ಯದರ್ಶಿ ಸಂದೀಪ ಬೂದಿಹಾಳ, ವಿಷಯ ಸಂಪನ್ಮೂಲ ವ್ಯಕ್ತಿಗಳಾದ ಸಿ.ಎನ್. ಪೂಜಾರ, ಸಂಜೀವ ಉಪಸ್ಥಿತರಿದ್ದರು. ಹೇಮಂತ ಕeðಗಿ ನಿರೂಪಿಸಿದರು.