ಗುತ್ತಿಗೆದಾರರು ಗುಣಮಟ್ಟ ಕಾಪಾಡಲು ಆದ್ಯತೆ ನೀಡಬೇಕು: ಕೆ.ಎಂ.ಶಿವಲಿಂಗೇಗೌಡ

ಗುತ್ತಿಗೆದಾರರು ಗುಣಮಟ್ಟ ಕಾಪಾಡಲು ಆದ್ಯತೆ ನೀಡಬೇಕು: ಕೆ.ಎಂ.ಶಿವಲಿಂಗೇಗೌಡ
Published on

ಅರಸೀಕೆರೆ: ನಗರ ಹಾಗೂ ಗ್ರಾಮೀಣ ಜನರ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಜಿವಿಟಿ ಬಸವರಾಜು ಹೇಳಿದರು.

ತಾಲೂಕಿನ ಬಾಣಾವರ ಹೋಬಳಿ ತೊಂಡಿಗನಹಳ್ಳಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಸಂಪರ್ಕ ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಗಂಜಿಗೆರೆ ಪುರ-ಅರೇಹಳ್ಳಿ, ಕೆಂಗುರಬರಹಟ್ಟಿ, ಗಂಜಿಗೆರೆ, ಶಾನೆಗೆರೆ-ಸಿಂಗಟಗೆರೆ ಸಂಪರ್ಕ ರಸ್ತೆ ಸೇರಿ ಹಲವೆಡೆ ಸಮರ್ಪಕ ಹಾಗೂ ಸುಸಜ್ಜಿತ ಸೇತುವೆ ನಿರ್ಮಿಸಲು ನಿಗಮದಿಂದ 7.62 ಕೋಟಿ ರೂ.ಅನುದಾನ ಮಂಜೂರಾಗಿದ್ದು ಶೀಘ್ರ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.ಶುದ್ಧ ಕುಡಿಯುವ ನೀರು, ರಸ್ತೆ, ಶಾಲಾ,ಕಾಲೇಜು ನಿರ್ಮಾಣ, ನಮ್ಮಕ್ಲಿನಿಕ್ ಸೇರಿ ಹಲವು ಜನಪರ ಕೆಲಸಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತು ನೀಡಿದ್ದಾರೆ. ಜತೆಗೆ ಡಬಲ್ ಇಂಜಿನ್ ಸರ್ಕಾರದಲ್ಲಿ ದೊಡ್ಡ ದೊಡ್ಡ ಯೋಜನೆಗಳಿಗೆ ನಿರೀಕ್ಷೆಗೂ ಮೀರಿದ ಅನುದಾನ ಹರಿದುಬಂದಿದೆ ಎಂದು ಸಮರ್ಥಿಸಿಕೊಂಡರು.


ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ,ರಸ್ತೆ ಅಭಿವೃದ್ಧಿ ನಿಗಮದ ಮೂಲಕ ಸೇತುವೆಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಗುತ್ತಿಗೆದಾರರು ಗುಣಮಟ್ಟ ಕಾಪಾಡಲು ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಶಾನೆಗೆರೆ ಗ್ರಾಪಂ ಅಧ್ಯಕ್ಷೆ ಆಶಾ ರಾಜಣ್ಣ, ಮುಖಂಡರಾದ ತೊಂಡಿಗನಹಳ್ಳಿ ಕೃಷ್ಣಮೂರ್ತಿ, ಗಿರಿಯಪ್ಪ, ಅಣ್ಣಾಯ್ಕನಹಳ್ಳಿ ವಿಜಯಕುಮಾರ್,ಬಾಣಾವರ ಶ್ರೀಧರ್, ಕೊಟ್ರೇಶ್, ಮಾದನಹಳ್ಳಿ ಚಂದ್ರು,ಅವಿನಾಶ್ ನಾಯ್ಡು ಇನ್ನಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net