ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಶೇ. 4 ಮೀಸಲಾತಿಗೆ ವಿರೋಧ

8 Dwd 4
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂ ಸಮಾಜದವರಿಗೆ ಶೇ. 4 ಮೀಸಲಾತಿ ನೀಡುವ ವಿಧೇಯಕ್ಕೆ ಒಪ್ಪಿಗೆ ನೀಡಬಾರದು ಎಂದು ಒತ್ತಾಯಿಸಿ ವಿಶ್ವ ಹಿಂದು ಪರಿಷತ್ ವತಿಯಿಂದ ನಗರದ ಜಿಲ್ಲಾಽಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಶೇ. 4ರಷ್ಟು ಮೀಸಲಾತಿಯನ್ನು ಪರಿಚಯಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ಡಾ. ಅಂಬೇಡ್ಕರ್ ಅವರು ಸಂವಿಧಾನ ರಚಿಸುವಾಗ ಧರ್ಮಾಧಾರಿತ ಮೀಸಲಾತಿಯನ್ನು ವಿರೋಽಸಿದ್ದರು. ವಿವಿಧ ರಾಜ್ಯಗಳಲ್ಲಿ ಇದೇರೀತಿಯ ಮೀಸಲಾತಿ ಒದಗಿಸುವ ಪ್ರಯತ್ನಗಳಿಗೆ ನ್ಯಾಯಾಲಯ ತಿರಸ್ಕರಿಸಿದ ಉದಾಹರಣೆ ಇವೆ. ಹೀಗಿದ್ದರೂ ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಕೂಡಲೇ ಈ ಮಸೂದೆಯನ್ನು ಅನುಮೋದಿಸದೆ ತಡೆಹಿಡಿಯಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.

ಪರಿಷತ್ ಪದಾಽಕಾರಿಗಳಾದ ಮಹೇಶ ಪಾಟೀಲ, ಸಿದ್ದು ಹಿರೇಮಠ, ಮೃತ್ಯುಂಜಯ ವಾಣಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net