ಗುಮ್ಮಟ ನಗರಿಯಲ್ಲಿ ಮತ್ತೆ ಮೊಳಗಿತು ಗುಂಡಿನ ಸದ್ದು.....!

IMG-20201118-WA0110
Published on

ವಿಜಯಪುರ: ಭೀಮಾತೀರದ ರೌಡಿ ಶೀಟರ್ ಮಹಾದೇವ ಸಾಹುಕಾರ್ ಮೇಲಿನ ಗುಂಡಿನ ದಾಳಿ ಪ್ರಕರಣ ತನಿಖೆ ಹಂತದಲ್ಲಿರುವಾಗಲೇ ಮತ್ತೊಂದು ಗುಂಡಿನ ದಾಳಿ ನಡೆದಿದೆ.

ನಗರದ ಜಿಪಂ ಬಳಿಯ ವಿಡಿಎ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಬುಧವಾರ ರಾತ್ರಿ 9 ರ ಸುಮಾರಿಗೆ ಗುಂಡಿನ ದಾಳಿ ನಡೆದಿದೆ.

ಘಟನೆಯಲ್ಲಿ ಬೇಗಂ ತಾಲಾಬ್ ತಾಂಡಾದ ನಿವಾಸಿ ಬುದ್ದು ರಾಠೋಡ ಎಂಬಾತನಿಗೆ ಗುಂಡು ತಗುಲಿದೆ‌. ತುಳಸಿರಾಮ ಹರಿಜನ ಎಂಬಾತ ಗುಂಡಿನ ದಾಳಿ ನಡೆಸಿದ್ದಾನೆ.

ಇನ್ನೋವಾ ಕಾರ್ ರಿಪೇರಿ ಮತ್ತು ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಜಗಳ ಉಂಟಾಗಿ ತುಳಸಿರಾಮ ಒಂದು ಸುತ್ತಿನ ಗುಂಡು ಹಾರಿಸಿದ್ದಾನೆ. ಬುದ್ದು ರಾಠೋಡಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಎಸ್ ಪಿ ಅನುಪಮ್ ಅಗರವಾಲ್ ತಿಳಿಸಿದ್ದಾರೆ‌.

ಪೊಲೀಸರ ತಂಡ ಸ್ಥಳದಲ್ಲೇ ಬೀಡು ಬಿಟ್ಟಿದ್ದು ಪರಿಶೀಲನೆ ನಡೆಸುತ್ತಿದೆ. ಜಲನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲು ತಯಾರಿ ನಡೆಸಿದ್ದಾಗಿ ಎಸ್ ಪಿ ಅಗರವಾಲ ಪ್ರತಿಕ್ರಿಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net