ಗುರು ಕೊಟ್ರಸ್ವಾಮಿ ರಥೋತ್ಸವ ಅದ್ದೂರಿ

Kotraswamy
Published on

ಚಿತ್ರದುರ್ಗ: ತಾಲೂಕಿನ ಚಿಕ್ಕಪ್ಪನಹಳ್ಳಿ ಗ್ರಾಮದ ಗುರು ಕೊಟ್ರಸ್ವಾಮಿ ರಥೋತ್ಸವವೂ ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ಅದ್ದೂರಿಯಾಗಿ ಜರುಗಿತು.

ಸ್ವಾಮಿಯ ರಥವನ್ನು ಎಳೆಯುವ ಕ್ಷಣಕ್ಕಾಗಿ ಅನೇಕ ಭಕ್ತರು ಕಾತರದಿಂದ ಕಾಯುತ್ತಿದ್ದರು. ಚಾಲನೆ ದೊರೆಯುತ್ತಿದ್ದ ಕೊಟ್ರ ಸ್ವಾಮಿ ಕೀ ಜೈ, ಹರ ಹರ ಮಹಾದೇವ್ ಎಂದು ಜಯಘೋಷ ಮೊಳಗಿಸಿದರು. ಈ ವೇಳೆ ಭಕ್ತೋತ್ಸಾಹ ಮುಗಿಲುಮುಟ್ಟಿತ್ತು. ನಂದಿ ಕೋಲು ಹೊತ್ತವರು ಕುಣಿದು ಸಂಭ್ರಮಿಸಿದರು.

ರಥಕ್ಕೆ ಬಾಳೆಹಣ್ಣನ್ನು ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು. ರಥೋತ್ಸವದ ಅಂಗವಾಗಿ ಸ್ವಾಮಿಗೆ ಮುಂಜಾನೆ ಅಭಿಷೇಕ, ಅಲಂಕಾರ ಸೇವೆ ಸೇರಿ ಇತರೆ ಪೂಜಾ ಕೈಂಕರ್ಯ ಶಾಸ್ತ್ರೋಕ್ತವಾಗಿ ನೆರವೇರಿದವು.

ರಥೋತ್ಸವಕ್ಕೂ ಮುನ್ನ ದೇಗುಲದಿಂದ ಸ್ವಾಮಿಯ ಉತ್ಸವ ಮೂರ್ತಿಯನ್ನು ಪುಷ್ಪಾಲಂಕೃತ ಪಲ್ಲಕ್ಕಿಯಲ್ಲಿ ಕರೆತಂದು ಪೂಜೆ ಸಲ್ಲಿಸಲಾಯಿತು. ನಂತರ ಮೂರ್ತಿಯನ್ನು ರಥದ ಬಳಿ ಕರೆತಂದು ಪ್ರದಕ್ಷಿಣೆ ಹಾಕಿಸಿ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net