ಗುರುಕುಲದ ಹಸಿರು ಪ್ರೇಮ ಮಾದರಿ ಕಾರ್ಯ

IMG-20230721-WA0025
Published on

ಭಾಲ್ಕಿ: ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದ ಹಸಿರು ವಾತಾವರಣ, ಪರಿಸರ ಪ್ರೇಮ, ಕಾಳಜಿಯ ಕಾರ್ಯ ಎಲ್ಲರಿಗೂ ಮಾದರಿ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ. ಹೇಳಿದರು.

ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದ ಹಸಿರು ಪರಿಸರ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಗುರುಕುಲ ಶಾಲೆ, ಕಾಲೇಜಿನ ಸುತ್ತಮುತ್ತ, ರಸ್ತೆ ಅಕ್ಕಪಕ್ಕ ಸೇರಿದಂತೆ ಎಲ್ಲೆಲ್ಲಿ ಸ್ಥಳವಿದೆಯೋ ಅಲ್ಲಲ್ಲಿ ಗಿಡಗಳನ್ನು ನೆಟ್ಟು ಬೆಳೆಸಿರುವುದು ಪ್ರಶಂಸನೀಯ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ವಚ್ಛ, ಸುಂದರ ಸಮಾಜ, ಗ್ರಾಮ ನಿರ್ಮಿಸಲು ಪ್ರತಿಯೊಬ್ಬರೂ ಮನೆಗೊಂದು ಮರ, ಓಣಿಗೊಂದು ಚಿಕ್ಕ ಉದ್ಯಾನ ನಿರ್ಮಿಸಲು ಶ್ರಮಿಸಬೇಕು ಎಂದು ತಿಳಿ ಹೇಳಿದರು.

ಅನುಭವ ಮಂಟಪದ ಅಧ್ಯಕ್ಷ ಶ್ರೀ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಎಲ್ಲೆಡೆ ಹಸಿರುಮಯ ವಾತಾವರಣ ಬೆಳೆಸಲು ಯೋಜನೆ ರೂಪಿಸಿರುವುದು ಸಂತಸದ ಸಂಗತಿ ಎಂದು ನುಡಿದರು.

ಹಿರೇಮಠದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಬಿ.ಪಾಟೀಲ, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net