ಗುರುಗಳ ಕೈಯಲ್ಲಿದೆ ವಿದ್ಯಾರ್ಥಿಗಳ ಭವಿಷ್ಯ

web6
ಚನ್ನಮ್ಮ ಕಿತ್ತೂರು ಗುರುಭವನದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಗುರುವಂದನೆ ಕಾರ್ಯಕ್ರಮವನ್ನು ಶಾಸಕ ಬಾಬಾಸಾಹೇಬ ಪಾಟೀಲ, ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ ಉದ್ಘಾಟಿಸಿದರು. ಎಸ್.ಬಿ.ದಳವಾಯಿ, ಗಜಾನನ ಸಗಲನ್ನವರ ಇತರರಿದ್ದರು.
Published on

ಚನ್ನಮ್ಮ ಕಿತ್ತೂರು: ಸಂಬಂಧಗಳ ಬೆಲೆಯನ್ನು ಮನವರಿಕೆ ಮಾಡಿಕೊಡುವ ಮೂಲಕ ಮಕ್ಕಳಲ್ಲಿ ಒಳ್ಳೆಯ ಸಂಸ್ಕೃತಿ ಬೆಳೆಸಬೇಕಿದೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ಇಲ್ಲಿನ ಗುರುಭವನದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಮಂಗಳವಾರ ಹಮ್ಮಿಕೊಂಡಿದ್ದ ಗುರು ವಂದನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಭವಿಷ್ಯ ನಿರ್ಮಾತೃ ಗುರು ಕೈಯಲ್ಲಿದೆ. ಸಮಾಜದಲ್ಲಿ ಉತ್ತಮ ವ್ಯಕ್ತಿ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಹಿರಿದು ಎಂದರು.

ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ ಮಾತನಾಡಿದರು.ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ರಾಜ್ಯ, ಜಿಲ್ಲೆ, ತಾಲೂಕು ಮಟ್ಟದ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಶಿಕ್ಷಕರಾದ ಗಾಯತ್ರಿ ಅಜ್ಜನವರ, ಎಸ್.ಬಿ.ದಳವಾಯಿ, ಗಜಾನನ ಸಗಲನ್ನವರ, ಐ.ಬಿ.ಉಪರಿ, ಸಿದ್ದಣ್ಣ ಹುಲಮನಿ, ಬಿ.ಎಸ್.ಹುಲ್ಲೂರ, ವಿಠ್ಠಲ ನನ್ನೂರ, ಶರೀನಬಾನು ಸೌದಾಗರ, ಮೀನಾಕ್ಷಿ ಸುಡಿ, ಪ್ರಕಾಶ ಬೆಳವಂಕಿ, ಮಹೇಶ ಹೆಗಡೆ, ಜ್ಯೋತಿ ಕೋಟಗಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net