ಗುರುಗುಂಟಾದಲ್ಲಿ ಸ್ವಾತಂತ್ರ್ಯೋತ್ಸವ ಅದ್ದೂರಿ

Untitled design
ಗುರುಗುಂಟದ ರಾಜಗುರು ಶಿಕ್ಷಣ ಸಂಸ್ಥೆಯಲ್ಲಿ ಸಂಸ್ಥಾಪಕ ಸಿದ್ದುರಾಜ ರಾಜಗುರು ಮಂಗಳವಾರ ಧ್ವಜಾರೋಹಣ ನೆರವೇರಿಸಿದರು. ದೈಹಿಕ ಶಿಕ್ಷಕ ಬಸವರಾಜ ಜಗದ್ ಇದ್ದರು.
Published on

ಗುರುಗುಂಟ: ಗ್ರಾಪಂ ಆವರಣದಲ್ಲಿ ರಾಣಿ ತಾರಾ 77ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಮಂಗಳವಾರ ನೆರವೇರಿಸಿದರು.

ರಾಜಗುರು ಶಿಕ್ಷಣ ಸಂಸ್ಥೆಯಲ್ಲಿ ಸಂಸ್ಥಾಪಕ ಸಿದ್ದುರಾಜ ರಾಜಗುರು, ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಸ್ಡಿಎಂಸಿ ಅಧ್ಯಕ್ಷ ವಿಜಯಕುಮಾರ ನಾಯಕ ಗಲಗ, ಉಪ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ರಂಗಪ್ಪ ಕಾಮಳೆ, ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಡಾ. ಅಭಿಜಿತ್ ನಾಯಕ, ನಾಡಕಚೇರಿಯಲ್ಲಿ ರಂಗಪ್ಪ ದೊರೆ, ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಅಧಿಕಾರಿ ಹನುಮಂತ ರಾಥೋಡ್, ಪಶು ಚಿಕಿತ್ಸಾ ಕೇಂದ್ರದಲ್ಲಿ ಪಶು ವೈದ್ಯಾಧಿಕಾರಿ ಡಾ. ಸತ್ಯನಾರಾಯಣ ಮಿರಿಯಾಳ ಧ್ವಜಾರೋಹಣ ನೆರವೇರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net