ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ ನ.9 ರಂದು

depositphotos_5993687-stock-illustration-friendship
Published on

ಹನೂರು : ತಾಲೂಕಿನ ಮಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ನ.9 ರಂದು 2009-10ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಕೊಳ್ಳೇಗಾಲ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮಂಜುಳಾ ನೆರವೇರಿಸಲಿದ್ದು, ಅಧ್ಯಕ್ಷೆತೆಯನ್ನು ಮುಖ್ಯ ಮಹೇಶ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಮಂಜುನಾಥ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಕೊಳ್ಳೇಗಾಲದ ಎಬಿನೇಜರ್, ಕಾಮಗೆರೆ ನಿವೃತ್ತ ಮುಖ್ಯ ಶಿಕ್ಷಕಿ ಚಿನ್ನಮ್ಮ, ಚಿಕ್ಕಮಗಳೂರಿನ ನಿವೃತ್ತ ಶಿಕ್ಷಕ ಎ.ಎನ್ ಪರಮೇಶ್ವರಪ್ಪ, ರಾಮಾಪುರ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶಾಂತಿ, ರಾಮಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ

ಶಾಂತಕುಮಾರಿ, ಹೊಸ ಮಾಲಂಗಿ ಸರ್ಕಾರಿ ಪ್ರೌಢಶಾಲೆಯ ಎಸ್. ದೇವರಾಜು, ಕೊಳ್ಳೇಗಾಲ ಎಸ್‌ವಿಕೆ ಕಾಲೇಜಿನ ಉಪನ್ಯಾಸಕಿ ನಿರ್ಮಲ, ದೇವಲಪುರ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪಿ.ಎಸ್.ಹರ್ಷ, ಕೊಳ್ಳೇಗಾಲ ತಾಲೂಕು ಅಲ್ಪ ಸಂಖ್ಯಾತರ ವಿಸ್ತರಣಾಧಿಕಾರಿ ಸಿದ್ದರಾಜು, ಪೊಲೀಸ್ ಇಲಾಖೆಯ ಕಾಮಗೆರೆ ಶಂಕರ್ ಹಾಗೂ ಅತಿಥಿ ಶಿಕ್ಷಕ ಶಿವನಾಗು ಭಾಗವಹಿಸಲಿದ್ದಾರೆ ಎಂದು ಹಳೆ ವಿದ್ಯಾರ್ಥಿಗಳ ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net