ಗುರುವಾರ ವರನಟ ಡಾ.ರಾಜ್ ಕುಮಾರ್ 96ನೇ  ಜನ್ಮ ದಿನಾಚರಣೆ

Dr. Rajkumar
Published on

ಹಾಸನ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಸರ್ಕಾರಿ ಶುಶ್ರೂಷ ಮಹಾವಿದ್ಯಾಲಯದ ಸಹಯೋಗದಲ್ಲಿ ಏ.24ರ ಗುರುವಾರ ಬೆಳಗ್ಗೆ 11 ಗಂಟೆಗೆ ಸರ್ಕಾರಿ ಶುಶ್ರೂಷ ಮಹಾವಿದ್ಯಾಲಯದ ಸಭಾಂಗಣದಲ್ಲಿ ಡಾ. ರಾಜ್ ಕುಮಾರ್ ಅವರ 96ನೇ ಜನ್ಮ ದಿನಾಚರಣೆಯನ್ನು ಆಯೋಜಿಸಲಾಗಿದೆ.

ಮಾಜಿ ಪ್ರಧಾನ ಮಂತ್ರಿ ಹಾಗೂ ರಾಜ್ಯಸಭಾ ಸದಸ್ಯರಾದ ಎಚ್.ಡಿ.ದೇವೇಗೌಡ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಶಾಸಕರಾದ ಸ್ವರೂಪ್ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಸದರಾದ ಶ್ರೇಯಸ್ ಎಂ.ಪಟೇಲ್, ಶಾಸಕರಾದ ಎಚ್.ಡಿ.ರೇವಣ್ಣ, ಡಾ.ಸಿ.ಎನ್.ಬಾಲಕೃಷ್ಣ, ಎ.ಮಂಜು, ಎಚ್.ಕೆ.ಸುರೇಶ್, ಸಿಮೆಂಟ್ ಮಂಜು, ವಿಧಾನ ಪರಿಷತ್ ಶಾಸಕರಾದ ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ, ಡಾ.ಸೂರಜ್ ರೇವಣ್ಣ ಹಾಗೂ ನಗರಸಭೆ ಅಧ್ಯಕ್ಷ ಎಂ. ಚಂದ್ರೇಗೌಡ ಭಾಗವಹಿಸಲಿದ್ದಾರೆ ಎಂದು ಜಿಲ್ಲಾಡಳಿತ ಪ್ರಕಟಣೆ ಮೂಲಕ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net