ಗುರುವಿನಪುರಕ್ಕೆ ಜಿಪಂ ಸಿಇಒ ಭೇಟಿ

06-GPT-1
Published on

ಗುಂಡ್ಲುಪೇಟೆ: ತಾಲೂಕಿನ ಗುರುವಿನಪುರ ಗ್ರಾಮದಲ್ಲಿ ಬೂದು ನೀರು ನಿರ್ವಹಣಾ ಘಟಕದ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಭೇಟಿ ನೀಡಿ ಪರಿಶೀಲಿಸಿದರು.

ನಂತರ ತೆರಕಣಾಂಬಿ ಗ್ರಾಮ ಪಂಚಾಯಿತಿ ವ್ಯಾಪಿಯಲ್ಲಿ ನಡೆಯುತ್ತಿರುವ ಅಟಲ್ ಭೂ ಜಲ ಯೋಜನೆ ಕಾಮಗಾರಿ ಹಾಗೂ ಕೆಲಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಗ್ಗಳಹುಂಡಿ, ಕೆಲಸೂರು ಹಾಗೂ ಮಲ್ಲನಹುಂಡಿ ಗ್ರಾಮದಲ್ಲಿ ನಡೆಯುತ್ತಿರುವ ನಾಲೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದರು. ನರೇಗಾ ಸಹಾಯಕ ನಿರ್ದೇಶಕ (ಪ್ರಭಾರ) ನಾಗಭೂಷಣ್, ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮಹದೇವಸ್ವಾಮಿ, ರವಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net