ಚಾಮರಾಜನಗರ: ತಾಲೂಕಿನ ಮಾದಾಪುರ ರಸ್ತೆಯ ಬಳಿ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಗಲ ಗ್ರಾಮದ ನಂಜುಂಡಶೆಟ್ಟಿ(55) ಮೃತರು. ಮಾದಾಪುರದ ಹೊಸ ಪೆಟ್ರೋಲ್ ಬಂಕ್ ಸಮೀಪದ ರಸ್ತೆ ಬಳಿ ನಂಜುಂಡಶೆಟ್ಟಿ ಬುಧವಾರ ರಾತ್ರಿ ನಡೆದುಕೊಂಡು ಹೋಗುತ್ತಿದ್ದಾಗ ಗೂಡ್ಸ್ ಗಾಡಿ ಡಿಕ್ಕಿ ಹೊಡೆದಿದೆ. ನಂಜುಂಡಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೂಡ್ಸ್ ಚಾಲಕ ವಾಹನ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿದ ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಹನುಮಂತ ಉಪ್ಪಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ನಂಜುಂಡಶೆಟ್ಟಿ ಮೃತದೇಹವನ್ನು ಸಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಯಿತು.