ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

Published on

ಬೈಲಕುಪ್ಪೆ: ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಅರಕಲಗೂಡು ತಾಲೂಕು ದೊಡ್ಡ ಬೆಂಬತ್ತಿ ಗ್ರಾಮದ ರಂಗೇಗೌಡ ಅವರ ಪುತ್ರ ಪ್ರಕಾಶ್ (46) ಮೃತ. ಗುರುವಾರ ಪಿರಿಯಾಪಟ್ಟಣ ತಾಲೂಕು ಹುಣಸವಾಡಿ ಸರ್ಕಲ್ನ ಕೆರೆಯ ಸಮೀಪವಿರುವ ಬಿ.ಎಂ.ರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಕುಶಾಲನಗರ ಕಡೆಯಿಂದ ಬರುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ಪ್ರಕಾಶ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಈ ಸಂಬಂಧ ಪತ್ನಿ ಶೋಭಾ ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೃತ ದೇಹವನ್ನು ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ಕೊಂಡೊಯ್ದು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಯಿತು. ಸ್ಥಳಕ್ಕೆ ವೃತ್ತ ನಿರೀಕ್ಷಕ ದೀಪಕ್, ಪಿಎಸ್‌ಐ ರವಿ ಭೇಟಿ ನೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net