ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸಾವು

crime
Published on

ಮೈಸೂರು: ಮೈಸೂರು-ದಡದಹಳ್ಳಿ ರಸ್ತೆಯಲ್ಲಿ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾರೆ.

ಜಯಪುರ ಹೋಬಳಿ ಸಿಂಧುವಳ್ಳಿ ಗ್ರಾಮದ ನಿವಾಸಿ ಶ್ರೀನಿವಾಸ(45) ಮೃತರು. ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಇವರು ಎಂದಿನಂತೆ ತಮ್ಮ ಬೈಕ್‌ನಲ್ಲಿ ಮೈಸೂರಿಗೆ ಕೆಲಸಕ್ಕೆ ಹೋಗಿ ವಾಪಸಾಗುತ್ತಿದ್ದರು.

ಈ ಸಂದರ್ಭದಲ್ಲಿ ಚಾಲಕ ಟೀ ಅಂಗಡಿ ಬಳಿ ದಿಢೀರ್ ಆಗಿ ಗೂಡ್ಸ್ ವಾಹನ ನಿಲ್ಲಿಸಿದ್ದಾನೆ. ಆ ವೇಳೆ ಹಿಂಬದಿಯಲ್ಲಿ ಹೋಗುತ್ತಿದ್ದ ಶ್ರೀನಿವಾಸ್ ಬೈಕ್ ನಿಯಂತ್ರಿಸಲಾಗದೆ ಡಿಕ್ಕಿ ಹೊಡೆದಿದ್ದಾರೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net