

ರಾಯಚೂರು: ಸರ್ಕಾರ ಗೃಹ ಜ್ಯೋತಿ ಯೋಜನೆ ಮೂಲಕ ಬಡವರು ಹಾಗೂ ಸಾಮಾನ್ಯ ಜನರ ಬದುಕನ್ನು ಸುಸ್ಥಿರಗೊಳಿಸಲಾಗುತ್ತಿದೆ. ರಾಜ್ಯ ಸರ್ಕಾರ ಜನರ ಅನುಕೂಲಕ್ಕಾಗಿ ಐದು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದು, ಸರ್ಕಾರ ಜನಪರ ಆಡಳಿತ ನೀಡಲು ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
ಸ್ಥಳೀಯ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ಸೋಮವಾರ ಸಂಜೆ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿ, ಜನರು ಅಪೇಕ್ಷಿಸಿದಂತೆ ಪಾರದರ್ಶನ ಆಡಳಿತ ನೀಡಲಾಗುತ್ತಿದ್ದು, ಐದು ಗ್ಯಾರಂಟಿಗಳಲ್ಲಿ ಗೃಹ ಜ್ಯೋತಿ ಯೋಜನೆ ಮಹತ್ತರ ಯೋಜನೆಯಾಗಿದೆ ಎಂದರು.
ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ, ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ತಲಾ 10 ಕೆಜಿ ಅಕ್ಕಿ ನೀಡುವ ಭರವಸೆಯನ್ನು ಈಗಾಗಲೇ ಈಡೇರಿಸಲಾಗಿದ್ದು, ಅಕ್ಕಿ ಕೊರತೆಯಿಂದಾಗಿ 5 ಕೆಜಿ ಅಕ್ಕಿ ಬದಲಾಗಿ ನೇರವಾಗಿ ಲಾನುಭವಿಗಳ ಖಾತೆಗೆ ಹಣ ವರ್ಗಾಯಿಸಲಾಗುತ್ತಿದೆ.
ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ನೀಡುವ ಭರವಸೆಯನ್ನು ಈಗ ಈಡೇರಿಸಲಾಗುತ್ತಿದ್ದು, ಯೋಜನೆಯಡಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ನೀಡಲಾಗಿಲ್ಲ. ಅರ್ಜಿ ಸಲ್ಲಿಸಿದ ಮುಂದಿನ ತಿಂಗಳಿಂದ ಅವರ ವಿದ್ಯುತ್ ಸೊನ್ನೆ ಬರಲಿದೆ.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 5 ಸಾವಿರ ಕೋಟಿ ರೂ. ಘೋಷಣೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದ್ದು, ಈ ಭಾಗದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಕಾರ್ಯಕ್ರಮ ರೂಪಿಸಲಾಗಿದೆ.
ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸುವ ಕುರಿತು ಈಗಾಗಲೇ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ರಾಯಚೂರು ಜಿಲ್ಲೆಯ ಹೆಸರನ್ನು ಮಾತ್ರ ಶಿಾರಸ್ಸು ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ನಿಯೋಗ ತೆರಳಿ ಏಮ್ಸ್ ಸ್ಥಾಪನೆಗೆ ಮನವಿ ಮಾಡಲಾಗುವುದು ಎಂದು ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಮಾತನಾಡಿ, ಗ್ಯಾರಂಟಿ ಯೋಜನೆಗಳ ಜಾರಿ ಅಸಾಧ್ಯ ಎಂದು ಹೇಳಿದ್ದವರಿಗೆ ಅಚ್ಚರಿಯಾಗುವಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಮಾಡಿ ತೋರಿಸಿದೆ. ಜಿಲ್ಲೆಯಲ್ಲಿ ಗೃಹ ಜ್ಯೋತಿ ಯೋಜನೆಯಡಿ 2.50 ಲಕ್ಷ ಗ್ರಾಹಕರು ನೋಂದಾಯಿಸಿಕೊಂಡಿದ್ದು, ಉಳಿದವರು ನೋಂದಣಿ ಮಾಡಿಸಿಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಹಂಪನಗೌಡ ಬಾದರ್ಲಿ, ಹಂಪಯ್ಯ ನಾಯಕ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಂ, ಎಸ್ಪಿ ಬಿ.ನಿಖಿಲ್, ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಜೆಸ್ಕಾಂ ಬಳ್ಳಾರಿ ವಲಯ ಇಂಜಿನಿಯರ್ ಲಕ್ಷ್ಮಣ ಚೌಹಾಣ್, ಪ್ರಭಾರಿ ಅೀಕ್ಷಕ ಇಂಜಿನಿಯರ್ ಚಂದ್ರಶೇಖರ ದೇಸಾಯಿ ಉಪಸ್ಥಿತರಿದ್ದರು.