ಗೃಹ ನಿರ್ಮಾಣಕ್ಕೆ ಜಾಗ ಗುರುತಿಸಲು ಅಧಿಕಾರಿಗಳಿಗೆ ಡಿಸಿ.ಸೂಚನೆ

ಗೃಹ ನಿರ್ಮಾಣಕ್ಕೆ ಜಾಗ ಗುರುತಿಸಲು ಅಧಿಕಾರಿಗಳಿಗೆ  ಡಿಸಿ.ಸೂಚನೆ
Published on

ಹಾಸನ: ಪೌರ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಹಾಗೂ ವಿಶ್ರಾಂತಿ ಗೃಹ ನಿರ್ಮಾಣಕ್ಕೆ ಅಧಿಕಾರಿಗಳು ಮುತುವರ್ಜಿವಹಿಸಿ ಜಾಗ ಗುರುತಿಸಿ ನವೆಂಬರ್ ಅಂತ್ಯದೊಳಗೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಯೋಜನೆಯ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ದೊರಕಬೇಕು.ನಗರ, ಪುರಸಭೆ ಹಾಗೂ ಪಟ್ಟಣ ಪ್ರದೇಶಗಳಲ್ಲಿ ತೆರಿಗೆ ವಸೂಲಿ, ಘನ ತ್ಯಾಜ್ಯ ನಿರ್ವಹಣೆ, ನಿವೇಶನ ವಿಂಗಡಣೆ ಮಾಡಿ ಫಲಾನುಭವಿಗಳಿಗೆ ಹಂಚಿಕೆಗಾಗಿ ಕ್ರಮವಹಿಸಿ ಆದ್ಯತೆ ಮೆರೆಗೆ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ತಮ್ಮಯ್ಯ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣ ಮೂರ್ತಿ, ಜಿಲ್ಲಾ ನಗರಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ. ಜಗದೀಶ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಲಕ್ಷ್ಮೇಮೇಗೌಡ, ಸಮಿತಿಯ ಸದಸ್ಯ ಪಳನಿ ಹಾಗೂ ವಿವಿಧ ಅಧಿಕಾರಿಕಾರಿಗಳು ಇತರರು ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net