

ಮೈಸೂರು: ಮೈಸೂರು ತಾಲೂಕಿನ ಮಾರಶೆಟ್ಟಿಹಳ್ಳಿಯಲ್ಲಿ ಮನೆಯೊಂದರಲ್ಲಿ ಕಳ್ಳರು ಗೃಹೋಪಯೋಗಿ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.
ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ನಂದಕಿಶೋರ್ ಅವರು ಮಾರಶೆಟ್ಟಿಹಳ್ಳಿ ಖರೀದಿಸಿರುವ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡಿದ್ದರು. ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗಿದ್ದರು.
ಡಿ.21ರಂದು ಸಂಜೆ ಅವರು ವಾಪಸ್ ಬಂದಾಗ ಮನೆಯಲ್ಲಿ ಕಳ್ಳತನಾಗಿರುವುದು ಗೊತ್ತಾಗಿದೆ. ಬಾಗಿಲು ಮೀಟಿ ಒಳ ನುಗ್ಗಿದ ಖದೀಮರು, 80 ಸಾವಿರ ರೂ. ಮೌಲ್ಯದ ಗೃಹ ಬಳಕೆ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ.
ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.