

ತೀರ್ಥಹಳ್ಳಿ: ಶಾಸಕ ಆರಗ ಜ್ಞಾನೇಂದ್ರ ಶುಕ್ರವಾರ ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ತಮ್ಮ ರಾಜಕೀಯ ಗುರು ಚಕ್ಕೋಡಬೈಲು ದಿ. ಬೆನಕ ಭಟ್ಟರ ಭಾವಚಿತ್ರಕ್ಕೆ ನಮಿಸಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿ, ವಸತಿ ರಹಿತರಿಗೆ ಸೂರನ್ನು ಒದಗಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಆಶಯ ಈಡೇರಿಸುವುದಾಗಿ ಭರವಸೆ ನೀಡಿದರು.
ಸಿಎಂ ನನ್ನ ಮೇಲೆ ವಿಶ್ವಾಸವಿಟ್ಟು ನೀಡಿರುವ ಈ ಹುದ್ದೆಗೆ ನ್ಯಾಯ ಒದಗಿಸುವ ಮೂಲಕ ನನ್ನ ಯೋಗದಾನ ನೀಡಲು ವಸತಿ ಸಚಿವರೂ ಸೇರಿ ಎಲ್ಲರ ಸಹಕಾರದೊಂದಿಗೆ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದರು.
ರಾಜ್ಯದಲ್ಲಿ ವಸತಿ ಸಮಸ್ಯೆ ಇರುವ ಪ್ರದೇಶಗಳ ಬಗ್ಗೆ ಈಗಾಗಲೇ ಸಾಕಷ್ಟು ಅಧ್ಯಯನ ಮಾಡಿದ್ದೇನೆ. ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದು ಕ್ರಮ ಕೈಗೊಳ್ಳಬೇಕಿದೆ. ಕಳೆದೆರಡು ವರ್ಷಗಳಿಂದ ಪ್ರವಾಹದಿಂದಾಗಿ ವಿಶೇಷವಾಗಿ ಕೊಡಗು ಮತ್ತು ಉತ್ತರ ಕರ್ನಾಟಕ ಭಾಗದ ವಸತಿ ಹೀನರಾಗಿರುವವರ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು.
ಉಪಮá-ಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ, ಸಚಿವರಾದ ವಿ.ಸೋಮಣ್ಣ, ಆರ್.ಅಶೋಕ್, ಬಿಜೆಪಿ ಮುಖಂಡರಾಾದ ಆರ್.ಮದನ್, ಬೇಗುವಳ್ಳಿ ಸತೀಶ್, ಕೆ.ನಾಗರಾಜ ಶೆಟ್ಟಿ, ಚಂದವಳ್ಳಿ ಸೋಮಶೇಖರ್, ಕುಕ್ಕೆ ಪ್ರಶಾಂತ್ ಇದ್ದರು.