ಗೃಹಜ್ಯೋತಿ ಉದ್ಘಾಟನಾ ಕಾರ್ಯಕ್ರಮ

hescom
Published on

ಬಾಗಲಕೋಟೆ: ಜಿಲ್ಲಾ ಮಟ್ಟದ ಗೃಹಜ್ಯೋತಿ ಉದ್ಘಾಟನಾ ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಇಂದು ಹೆಸ್ಕಾಂ ಎಂಡಿಮೊಹಮ್ಮದ್ ರೋಷನ್ ಅವರೊಂದಿಗೆ ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಚರ್ಚಿಸಿದರು.

ಗೃಹಜ್ಯೋತಿ ಯೋಜನೆಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಆಗಸ್ಟ್ 5 ರಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಹಲವು ಗಣ್ಯರು ಚಾಲನೆ ನೀಡಲಿದ್ದಾರೆ. ಬಳಿಕ ಎಲ್ಲಾ ಜಿಲ್ಲೆಗಳಲ್ಲಿ ಚಾಲನೆ ನೀಡಲಾಗುತ್ತದೆ. ಆ ನಿಟ್ಟಿನಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಚಾಲನಾ ಕಾರ್ಯಕ್ರಮ ಯಶಸ್ವಿಗೊಳಿಸಲು ಇಲಾಖೆಯಿಂದ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳುವಂತೆ ಸಚಿವ ಆರ್ ಬಿ ತಿಮ್ಮಾಪೂರ ಅವರು ಸೂಚಿಸಿದರು.

ಇದೇ ವೇಳೆ ಜಿಲ್ಲೆಯಲ್ಲಿ ಟಿಸಿ ಬದಲಾವಣೆಯಲ್ಲಿ ಆಗುತ್ತಿರುವ ವಿಳಂಬ ಸೇರಿದಂತೆ ವಿದ್ಯುತ್ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸುವಂತೆ ಸಚಿವ ಆರ್ ಬಿ ತಿಮ್ಮಾಪೂರ ಅವರು ಹೆಸ್ಕಾಂ ಎಂಡಿ ಮೊಹಮ್ಮದ್ ರೋಷನ್ ಅವರಿಗೆ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net