ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆ ಸರಳಗೊಳಿಸಿ

01-08-Shiva-5
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನವನ್ನು ಸರಳಗೊಳಿಸುವಂತೆ ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಸುಗೂರೇಶ ದೇಸಾಯಿಗೆ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋ ಸಂಸ್ಥೆಯಿಂದ ಮಂಗಳವಾರ ಮನವಿ ಸಲ್ಲಿಸಲಾಯಿತು. ಸಂಸ್ಥೆ ಪದಾಕಾರಿಗಳಾದ ವೀರೇಶ ಜಲಗಾರ, ರವಿ ಚಂದ್ರಬಂಡಾ, ವನ್ನಪ್ಪ, ಈರಣ್ಣ, ಸುರೇಶ, ರಾಜೇಶ, ಜಂಬಣ್ಣ ಇದ್ದರು.
Published on

ರಾಯಚೂರು: ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನವನ್ನು ಸರಳಗೊಳಿಸುವ ಮೂಲಕ ಮಹಿಳೆಯರಿಗೆ ಅನುಕೂಲ ಕಲ್ಪಿಸಬೇಕು ಎಂದು ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋ ಸಂಸ್ಥೆ ಒತ್ತಾಯಿಸಿದೆ.
ಸಂಸ್ಥೆ ನಿಯೋಗ ಸ್ಥಳೀಯ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಸುಗೂರೇಶ ದೇಸಾಯಿಗೆ ಮಂಗಳವಾರ ಮನವಿ ಸಲ್ಲಿಸಿ, ಸರ್ಕಾರ ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವುದರಿಂದ ಸಮಸ್ಯೆಯಾಗುತ್ತಿದ್ದು, ಮುಕ್ತ ವೆಬ್‌ಸೈಟ್ ಮಾಡಿ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಯೋಜನೆಗೆ ಅರ್ಜಿ ಸಲ್ಲಿಸಲು ಕೂಲಿಕಾರ್ಮಿಕರು ಕೆಲಸ ಬಿಟ್ಟು ಸರತಿ ಸಾಲಿನಲ್ಲಿ ನಿಲ್ಲಬೇಕಾಗಿದ್ದು, ವೃದ್ಧರು, ಗರ್ಭೀಣಿಯರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಮಹಿಳೆಯರು ಸರತಿ ಸಾಲಿನಲ್ಲಿ ನಿಂತು ಟೋಕನ್ ಪಡೆದು ಮರುದಿನ ಪುನಃ ಸರತಿ ಸಾಲಿನಲ್ಲಿ ಬಂದು ನಿಂತು ಅರ್ಜಿ ಸಲ್ಲಿಸಬೇಕಾಗಿದೆ. ಕೂಡಲೇ ಅರ್ಜಿ ಸಲ್ಲಿಸುವ ವಿಧಾನವನ್ನು ಸರಳಗೊಳಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಸಂಸ್ಥೆ ಪದಾಕಾರಿಗಳಾದ ವೀರೇಶ ಜಲಗಾರ, ರವಿ ಚಂದ್ರಬಂಡಾ, ವನ್ನಪ್ಪ, ಈರಣ್ಣ, ಸುರೇಶ, ರಾಜೇಶ, ಜಂಬಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net