ಗೃಹಲಕ್ಷ್ಮಿ ಮೂಲಕ ಸರ್ಕಾರದಿಂದ ಮಹಿಳೆಯರಿಗೆ ಶಕ್ತಿ

30-08-Shiva-3
ರಾಯಚೂರು ತಾಲೂಕಿನ ದೇವಸುಗೂರಿನ ಅಂಬೇಡ್ಕರ್ ಸಮುದಾಯ ಭವನದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಬುಧವಾರ ಉದ್ಘಾಟಿಸಿದರು. ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಎಸ್ಪಿ ಬಿ.ನಿಖಿಲ್, ಸೀಶಕ್ತಿ ಮಹಿಳಾ ಸಂಘದ ಅಧ್ಯಕ್ಷೆ ಈರಮ್ಮ, ಕಾಂಗ್ರೆಸ್ ಮುಖಂಡೆ ಶಶಿಕಲಾ ಭೀಮರಾಯ ಇದ್ದರು.
Published on

ರಾಯಚೂರು: ಗೃಹಲಕ್ಷ್ಮಿ ಯೋಜನೆಯಡಿ ಪ್ರತಿಯೊಬ್ಬ ಮಹಿಳೆಯರ ಖಾತೆಗೆ ಎರಡು ಸಾವಿರ ರೂ. ಜಮಾ ಮಾಡುವ ಮೂಲಕ ಮಹಿಳೆಯರಿಗೆ ಸಂಕಷ್ಟದ ಸಂದರ್ಭದಲ್ಲಿ ಕುಟುಂಬ ನಿರ್ವಹಣೆ ಮಾಡುವ ಶಕ್ತಿಯನ್ನು ಸರ್ಕಾರ ನೀಡುತ್ತಿದೆ ಎಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹೇಳಿದರು.
ತಾಲೂಕಿನ ದೇವಸುಗೂರು ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ಚಾಲನೆ ನೀಡಿ ಮಾತನಾಡಿ, ಸರ್ಕಾರ ನೀಡಿದ ಭರವಸೆಯಂತೆ ಐದು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳಲ್ಲಿ ಮಹತ್ತರವಾದ ಗೃಹಲಕ್ಷ್ಮಿ ಯೋಜನೆಯಡಿ ಲಾನುಭವಿಗಳ ಖಾತೆಗೆ ಎರಡು ಸಾವಿರ ರೂ. ವರ್ಗಾವಣೆ ಮಾಡಲಾಗುತ್ತಿದೆ ಎಂದರು.
ಸರ್ಕಾರಿ ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಿದ್ದು, ಜಿಲ್ಲೆಯಲ್ಲಿ ಒಟ್ಟು 3.65 ಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಸಕ್ರಮವಾಗಿರುವ ಲಾನುಭವಿಗಳನ್ನು ಗುರುತಿಸಿ ಅವರ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ ಎಂದು ಬಸನಗೌಡ ದದ್ದಲ್ ತಿಳಿಸಿದರು.
ನಗರದ ಕನ್ನಡ ಭವನ, ರಾಗಿಮಾನಗಡ್ಡಾ ಬಡಾವಣೆಯ ಸಮುದಾಯ ಭವನಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಎಪಿಎಂಸಿ ಉಪಾಧ್ಯಕ್ಷ ಬಷೀರುದ್ದೀನ್, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಎಸ್ಪಿ ಬಿ.ನಿಖಿಲ್, ಜಿ.ಪಂ. ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ಸಹಾಯಕ ಆಯುಕ್ತೆ ಮಹೆಬೂಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನಕುಮಾರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net