ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಕಾಂಗ್ರೆಸ್ ಶಕ್ತಿ ಪ್ರದರ್ಶನ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ

Lakshmi Hebbalkar
ಸಾಂದರ್ಭಿಕ ಚಿತ್ರ
Published on

ಮೈಸೂರು: ಗೃಹಲಕ್ಷ್ಮಿ ಯೋಜನೆಯ ಸರ್ಕಾರಿ ಕಾರ್ಯಕ್ರಮವಾಗಿದ್ದು, ಕಾಂಗ್ರೆಸ್‌ನ ಶಕ್ತಿ ಪ್ರದರ್ಶನ ಅಲ್ಲ. ಇಂಹಹ ಚರ್ಚೆಗಳು ಅನಾವಶ್ಯಕ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದರು.
ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮದ ತಯಾರಿ ತುಂಬಾ ಜೋರಾಗಿ ನಡೆಯುತ್ತಿದೆ. ಮಹಿಳೆಯರಲ್ಲಿ ಉತ್ಸಾಹ ತುಂಬಿದ್ದು, ಕೇವಲ 15 ದಿನಗಳಲ್ಲಿ ಯಾರಿಗೂ ಏನು ತೊಂದರೆಯಾಗದೆ 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ಗೃಹಲಕ್ಷ್ಮೀ ಯೋಜನೆ ಕಾಂಗ್ರೆಸ್ ಕೊಟ್ಟಂತಹ ಗ್ಯಾರಂಟಿಗಳ ಅನುಷ್ಠಾನವೇ ಹೊರತು ಪಕ್ಷದ ಶಕ್ತಿ ಪ್ರದರ್ಶನ ಅಲ್ಲ. ಇದು ಕರ್ನಾಟಕ ರಾಜ್ಯದ ಮಹಿಳೆಯರ ಆರ್ಥಿಕ ಶಕ್ತಿ ಪ್ರದರ್ಶನ. ರಾಹುಲ್ ಗಾಂಧಿ ಅವರು ಬರುತ್ತಿರುವುದಕ್ಕೆ ಇಷ್ಟು ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದೆ. ಇದನ್ನು ಸಹಿಸದೆ ಪ್ರತಿಪಕ್ಷಗಳು ಟೀಕೆ ಮಾಡುತ್ತಿವೆ ಎಂದರು.
ರಾಹುಲ್ ಗಾಂಧಿಯವರು ಗೃಹ ಜ್ಯೋತಿ ಮತ್ತು ಯುವ ನಿಧಿ ಗ್ಯಾರಂಟಿಗಳ ಘೋಷಣೆಗೆ ಬಂದಿದ್ದರು. ಗೃಹ ಲಕ್ಷ್ಮಿ ಗ್ಯಾರಂಟಿ ಘೋಷಣೆಗೆ ಪ್ರಿಯಾಂಕಾ ಗಾಂಧಿ ಬಂದಿದ್ದರು. ಈಗ ಅನುಷ್ಠಾನ ಮಾಡುವ ಕಾರ್ಯಕ್ರಮದಲ್ಲಿ ನಮ್ಮ ನಾಯಕರನ್ನು ಕರೆದು ಗೌರವ ಕೊಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net