ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗಿಲ್ಲ ಶುಲ್ಕ

nagesh
ನಾಗೇಶ
Published on

ಯಲಬುರ್ಗಾ: ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಫಲಾನುಭವಿಗಳು ಅರ್ಜಿ ಸಲ್ಲಿಸಲು ಹಣ ನೀಡಬಾರದು ಎಂದು ಪಪಂ ಮುಖ್ಯಾಧಿಕಾರಿ ನಾಗೇಶ ತಿಳಿಸಿದರು.

ಈ ಕುರಿತು ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಯೋಜನೆಯ ನೋಂದಣಿ ಸಂಪೂರ್ಣ ಉಚಿತವಿದ್ದು, ಇದಕ್ಕಾಗಿ ಪಟ್ಟಣದ ಮೂರು ಕಡೆ ಕೇಂದ್ರಗಳನ್ನು ತೆರೆಯಲಾಗಿದೆ. ಪಪಂ ಕಚೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕರ್ನಾಟಕ ಒನ್ ಕೇಂದ್ರದಲ್ಲಿ ಉಚಿತ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.

ಇದಕ್ಕೆ ಯಾರೂ ಹಣ ನೀಡಬಾರದು. ಒಂದು ವೇಳೆ ಹಣ ಕೇಳಿದರೆ ತಕ್ಷಣ ನಮ್ಮ ಗಮನಕ್ಕೆ ತರಬೇಕು. ವಿವಿಧೆಡೆ ನೋಂದಣಿಗೆ ಹಣ ಪಡೆಯುತ್ತಿರುವ ಬಗ್ಗೆ ದೂರು ಬಂದಿದ್ದು, ಒಂದು ವೇಳೆ ಪಡೆದಿದ್ದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಆರಂಭದಲ್ಲಿ ಸರ್ವರ್ ತೊಂದರೆ ಆಗುತ್ತಿದ್ದು ಫಲಾನುಭವಿಗಳು ಸಹಕರಿಸಬೇಕು ಎಂದು ಮುಖ್ಯಾಧಿಕಾರಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net