ಗೃಹಲಕ್ಷ್ಮೀ,ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ವರದಾನ

6d1eccbd-87c5-4eee-94b4-147c3d6304fb--05
Published on

ಚಿತ್ರದುರ್ಗ: ಚುನಾವಣೆ ವೇಳೆ ಜನರಿಗೆ ನೀಡಿದ ವಚನಗಳನ್ನು ಪಾಲಿಸುತ್ತಿರುವ ದೇಶದ ಏಕೈಕ ಪಕ್ಷ ಕಾಂಗ್ರೆಸ್ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.
ಮೈಸೂರಿನಲ್ಲಿ ಆ.30ರಂದು ಎಐಸಿಸಿ ನಾಯಕ ರಾಹುಲ್ಗಾಂಧಿ,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಿದ್ದಾರೆ.
ದೇಶದ ಇತಿಹಾಸದ ಪುಟಗಳಲ್ಲಿ ಬರೆದಿಡುವಂತಹ ಮಹತ್ವಾಕಾಂಕ್ಷೆ ಯೋಜನೆ ಜಾರಿ ಕಾರ‌್ಯಕ್ರಮದ ನೇರ ಪ್ರಸಾರದ ವೀಕ್ಷಣೆಗೆ ಗ್ರಾಪಂ ವ್ಯಾಪ್ತಿ ಹಾಗೂ ನಗರ,ಪಟ್ಟಣಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿ ದುರಾಡಳಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ಈ ಯೋಜನೆ ವರ ದಾನವಾಗಲಿದೆ.
ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪ ಮಾಡಿ,ಜನರ ಮನಸ್ಸಿನಲ್ಲಿ ಸುಳ್ಳಿನ ಗೋಪುರ ಕಟ್ಟಿ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಜನವಿರೋಧಿ ಆಡಳಿತದಲ್ಲಿ ತೊಡಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿವೆ.ನಿರುದ್ಯೋಗ ಹೆಚ್ಚಾಗಿದ್ದು,ಮೋದಿ ಸರ್ಕಾರ ಈವರೆಗೂ ಭರವಸೆಗಳನ್ನು ಈ ಡೇರಿಸದೆ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ.
ದುಡಿಯಲು ಕೆಲಸ ಮತ್ತು ಕೈಯಲ್ಲಿ ದುಡ್ಡಿಲ್ಲದೆ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗಾಗಿ ಕಾಂಗ್ರೆಸ್,ರಾಜ್ಯದಲ್ಲಿ ಅನೇಕ ಜನಪರ ಯೋ ಜನೆಗಳ ಜತೆಗೆ, ಶಕ್ತಿ,ಅನ್ನಭಾಗ್ಯ,ಉಚಿತ ವಿದ್ಯುತ್ ಮೊದಲಾದ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ ಎಂದು ಆಂಜನೇಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net