ಗೆಜೆಟೆಡ್ ಪ್ರೊಬೇಷನರ್ಸ್ ಸ್ಪರ್ಧಾತ್ಮಕ ಪರೀಕ್ಷೆ 27 ರಂದು

CTD EXM
Published on

ಚಿತ್ರದುರ್ಗ: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಆಕ್ರಮಗಳಾಗದಂತೆ ಎಚ್ಚರಿಕೆಯಿಂದ ಕಾರ‌್ಯನಿರ್ವಹಿಸುವಂತೆ ಆ.27ರಂದು ನಡೆಯಲಿರುವ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಡಿಸಿ ಟಿ.ವೆಂಕಟೇಶ್ ತಾಕೀತು ಮಾಡಿದರು. ಡಿಸಿ ಕಚೇರಿಯಲ್ಲಿ ಬುಧ ವಾರ ನಡೆದ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು,ಯಾವುದೇ ಲೋಪದೋಷಗಳಿಗೆ ಅವಕಾಶ ನೀಡಬಾರದು. ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸುವ ಅಭ್ಯ ರ್ಥಿಗಳಿಗೆ ಅನ್ಯಾಯವಾಗಬಾರದು. ಕುಡಿಯುವ ನೀರು,ಶೌಚಗೃಹ ಸೌಲಭ್ಯ ಜತೆಗೆ ಕೊಠಡಿಗಳಲ್ಲಿ ಆಸನ,ಗಾಳಿ,ಬೆಳಕಿನ ವ್ಯವಸ್ಥೆ ಇರಬೇಕು. ಮಳೆ ನೀರಿನಿಂದ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದರು.
ಪ್ರಶ್ನೆ ಪತ್ರಿಕೆ,ಓಎಂಆರ್ ಬಂಡಲ್‌ಗಳನ್ನು ಮಾರ್ಗಾಧಿಕಾರಿಗಳು ಸರಿಯಾದ ಸಮಯಕ್ಕೆ ತಲುಪಿಸಬೇಕು. ಮುಖ್ಯಸ್ಥರು ಓಎಂಆರ್ ಬಂಡಲ್‌ಗಳನ್ನು ಅಂಚೆ ಮೂಲಕ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಳುಹಿಸಿಕೊಡಬೇಕು. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಬ ಳಿಯ ಅಂಚೆ ಕಚೇರಿಗಳು ಓಎಂಆರ್ ಬಂಡಲ್‌ಗಳು ತಲುಪುವವರೆಗೂ ಕಾರ್ಯ ನಿರ್ವಹಿಸಬೇಕೆಂದು ಅಂಚೆ ಅಧಿಕಾರಿಗಳಿಗೆ ಸೂಚಿಸಿ ದರು.
ಸಿಸಿ ಟಿವಿ ಕ್ಯಾಮರಾ,ಮೊಬೈಲ್ ಜಾಮರ್ ಅಳವಡಿಕೆ
ಆಯೋಗದಿಂದಲೇ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮರಾ,ಮೊಬೈಲ್ ಜಾಮರ್ ಅಳವಡಿಸಲಾಗುವುದು. ಕೊಠಡಿ ಮೇಲ್ವಿಚಾ ರಕರಿಗೂ ಬಾಡಿ ಕ್ಯಾಮರಾವಿರುತ್ತದೆ. ಅಭ್ಯರ್ಥಿಗಳನ್ನು ಪೂರ್ಣ ಪ್ರಮಾಣದಲ್ಲಿ ತಪಾಸಣೆಗೆ ಒಳಪಡಿಸಬೇಕು. ಪರೀಕ್ಷೆ ದಿನದಂದು ಕೇಂ ದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಸೆಕ್ಷನ್ 114 ವಿಧಿಸಿ ನಿಷೇದಾಜ್ಞೆ ಜಾರಿ ಮಾಡಲಾಗುವುದು.
ಈ ಕೇಂದ್ರಗಳ ಅಕ್ಕ ಪಕ್ಕದ ಝೆರಾಕ್ಸ್,ಕಂಪ್ಯೂಟರ್ ಹಾಗೂ ಇಂಟರ್‌ನೆಟ್ ಸೆಂಟರ್‌ಗಳನ್ನು ಮುಚ್ಚಬೇಕು.ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ಕೌಂಟರ್ ಸ್ಥಾಪಿಸುವುದರೊಂದಿಗೆ ಅಭ್ಯರ್ಥಿಗಳಿಗೆ ಗೊಂದಲವಾಗದಂತೆ ಅಗತ್ಯ ಸೂಚನೆಗಳಿರುವ ಫಲಕವನ್ನು ಹಾಕ ಬೇಕೆಂದರು.
ಅತ್ಯಂತ ಸೂಕ್ಷ್ಮ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಪರೀಕ್ಷೆಗಳಲ್ಲಿ ಅಕ್ರಮ ಎಸಗುವ ಸಂಭವವಿರುತ್ತದೆ. ಆದ್ದರಿಂದ ಅಭ್ಯರ್ಥಿಗಳ ತಪಾಸಣೆಯನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕೆಂದು ಎಸ್‌ಪಿ ರಂಜಿತ್‌ಕುಮಾರ್ ಬಂಡಾರು ಹೇಳಿದರು. ಪರೀಕ್ಷಾ ಕೇಂದ್ರ ಗಳಿ ಗೆ ಹಾಗೂ ಮಾರ್ಗಾಧಿಕಾರಿಗಳ ತಂಡಕ್ಕೆ ಭದ್ರತೆ ಕಲ್ಪಿಸಲಾಗುವುದು ಎಂದರು. ಬೇರೆ ಜಿಲ್ಲೆಗಳ ಅಭ್ಯರ್ಥಿಗಳ ಅನುಕೂಲಕ್ಕಾಗಿ ನಗರದ ಬಸ್,ರೈಲು ನಿಲ್ದಾಣಗಳಲ್ಲಿ ಪರೀಕ್ಷಾ ಕೇಂದ್ರಗಳ ಮಾಹಿತಿ ಪ್ರದರ್ಶಿಸುವಂತೆ ಅಧಿಕಾರಿಗಳಿಗೆ ಎಡಿಸಿ ಬಿ.ಟಿ. ಕುಮಾರಸ್ವಾಮಿ ತಿಳಿಸಿದರು.
24 ಪರೀಕ್ಷಾ ಕೇಂದ್ರ 8098 ಅಭ್ಯರ್ಥಿಗಳು
ಅಂದು ಬೆಳಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಪತ್ರಿಕೆ-1,ಮಧ್ಯಾಹ್ನ 2ರಿಂದ ಸಂಜೆ 4 ರವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ ಎ ಂದು ಡಿಡಿಪಿಐ ಎಂ.ಆರ್.ಮಂಜುನಾಥ ತಿಳಿಸಿದರು. ನಗರದಲ್ಲಿ 24 ಪರೀಕ್ಷಾ ಕೇಂದ್ರಗಳಿದ್ದು,8098 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿ ದ್ದಾರೆ. ಇದರಲ್ಲಿ 155 ಅಂಗವಿಕಲ ಅಭ್ಯರ್ಥಿಗಳಿದ್ದಾರೆ. 10 ಅಂಧ ವಿದ್ಯಾರ್ಥಿಗಳಿಗೆ ಸ್ಕ್ರೈಬ್ ಸೌಲಭ್ಯ ಒದಗಿಸಲಾಗುವುದೆಂದರು. ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಮತ್ತಿತರ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net