ಗೆಜೆಟ್ ಆದೇಶ ರದ್ದುಗೊಳಿಸಿ

4 HBD 1
ವಕ್ಪ್ ಆಸ್ತಿ ವಿವಾದ ವಿರೋಧಿಸಿ ಹುಮನಾಬಾದ್‌ನಲ್ಲಿ ಸೋಮವಾರ ಮಂಡಲ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಮೂಲಕ ತಹಸಿಲ್ ಕಚೇರಿಗೆ ಮುತ್ತಿಗೆ ಹಾಕಿದ ವೇಳೆ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಮಾತನಾಡಿದರು. ಪ್ರಮುಖರಾದ ಶಿವಾನಂದ ಮಂಠಾಳಕರ್, ಬಸವರಾಜ ಆರ್ಯ, ಮಲ್ಲಿಕಾರ್ಜುನ ಕುಂಬಾರ, ಪ್ರಭಾಕರ ನಾಗರಾಳೆ ಇತರರಿದ್ದರು.
Published on

ಹುಮನಾಬಾದ್: ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ಲ್ಯಾಂಡ್ ಜಿಹಾದ್ ಹಾಗೂ ವಕ್ಪ್ ಅಕ್ರಮ ವಿರೋಧಿಸಿ ಪಟ್ಟಣದಲ್ಲಿ ಸೋಮವಾರ ಬಿಜೆಪಿಯಿಂದ ತಹಸಿಲ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು. ಥೇರ್ ಮೈದಾನದಿಂದ ಅಂಬೇಡ್ಕರ್, ಶಿವಚಂದ್ರ ವೃತ್ತದ ಮೂಲಕ ತಹಸಿಲ್ ಕಚೇರಿವರೆಗೆ ಮೆರವಣಿಗೆ ನಡೆಯಿತು.

ನೇತೃತ್ವ ವಹಿಸಿದ್ದ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಮಾತನಾಡಿ, ಅಲ್ಪಸಂಖ್ಯಾತರ ಓಲೈಕೆಗಾಗಿ ಸಾವಿರಾರು ವರ್ಷಗಳ ಮಠ-ಮಂದಿರ, ಹಿಂದುಗಳ ಜಮೀನುಗಳನ್ನು ವಕ್ಪ್ ಆಸ್ತಿ ಎಂದು ಮಾರ್ಪಡಿಸಲು ಯತ್ನಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿದರು.

ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ವಕ್ಪ್ ಹೆಸರಿನಲ್ಲಿ ರೈತರ ಜಮೀನು, ಮಠ-ಮಂದಿರಗಳ ಆಸ್ತಿ ಕಬಳಿಸಿ ಜನರ ಬದುಕು ದುಸ್ಥರಗೊಳಿಸಲು ಮುಂದಾಗಿರುವುದನ್ನು ಸಹಿಸಲಾಗದು. ಕೂಡಲೇ ವಕ್ಪ್ ಬೋರ್ಡ್ ನಿಯಮ ಬದಲಿಸಬೇಕು. ನೋಟಿಸ್ ನೀಡಿಕೆ ನಿಲ್ಲಿಸಿ ಗೆಜೆಟ್ ಆದೇಶ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಪಕ್ಷದ ನಿಕಟಪೂರ್ವ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್, ಮುಖಂಡರಾದ ಬಸವರಾಜ ಆರ್ಯ, ವಿಶ್ವನಾಥ ಪಾಟೀಲ್, ಮಲ್ಲಿಕಾರ್ಜುನ ಪಾಟೀಲ್ ಬೆಳಕೇರಾ, ಅನೀಲ ಪಸರ್ಗಿ, ಗಜೇಂದ್ರ ಕನಕಟಕರ್, ಸಂತೋಷ ಪಾಟೀಲ್, ಡಾ.ಭದ್ರೇಶ ಪಾಟೀಲ್ ಇತರರು ಪಾಲ್ಗೊಂಡಿದ್ದರು. ತಹಸೀಲ್ದಾರ್ ಅಂಜುಂ ತಬಸ್ಸುಮ್‌ಗೆ ಮನವಿಪತ್ರ ಸಲ್ಲಿಸಲಾಯಿತು.

ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ಸಮುದಾಯದ ಓಲೈಕೆಗೆ ಮುಂದಾಗಿದ್ದು ಸರಿಯಲ್ಲ. ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ನಮೂದಿಸಿದ್ದನ್ನು ಕೂಡಲೇ ತೆಗೆದು ಹಾಕಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ.

| ಡಾ.ಸಿದ್ದಲಿಂಗಪ್ಪ ಪಾಟೀಲ್ ಹುಮನಾಬಾದ್ ಶಾಸಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net