ಗೆದ್ದರೆ ಸಂತೋಷ, ಸೋತರೆ ಅನುಭವ ಆಗಬೇಕು

22222 1111
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕ್ರೀಡಾ ಚಟುವಟಿಗಳಲ್ಲಿ ಭಾಗವಹಿಸುವುದರಿಂದ ಕೆಲಸದಲ್ಲಿ ಲವಲವಿಕೆ ಮತ್ತು ಉತ್ತಮ ಆರೋಗ್ಯ ಪಡೆಯಲು ಸಾಧ್ಯವಾಗುತ್ತದೆ. ಕ್ರೀಡಾಪಟುಗಳು ಗೆದ್ದರೆ ಸಂತೋಷ ಪಡಬೇಕು, ಸೋತರೆ ಅನುಭವ ಎಂದು ತಿಳಿದು ಸಮಾಧಾನಪಡಬೇಕು ಎಂದು ಮೇಯರ್ ಈರೇಶ ಅಂಚಟಗೇರಿ ಹೇಳಿದರು.
ನಗರದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ದನಗೌಡರ ಮಾತನಾಡಿ, ಒತ್ತಡದ ಕೆಲಸಗಳ ಮಧ್ಯೆ ನೌಕರರಿಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಉಲ್ಲಾಸದಿಂದ ತೊಡಗಿಕೊಳ್ಳಲು ಸಹಾಯಕವಾಗುತ್ತದೆ ಎಂದರು.
ಬಯಲು ಸೀಮೆ ಅಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ತವಣಪ್ಪ ಅಷ್ಟಗಿ ಅಧ್ಯಕ್ಷತೆ ವಹಿಸಿದ್ದರು. ಪಾಲಿಕೆ ಆಯುಕ್ತ ಡಾ. ಬಿ. ಗೋಪಾಲಕೃಷ್ಣ ಬಿ., ಡಿಡಿಪಿಐ ಎಸ್.ಎಸ್. ಕೆಳದಿಮಠ, ಬಿಇಒ ಗಿರೀಶ ಪದಕಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ ಸರಶೆಟ್ಟಿ ಹಾಗೂ ಸಂಘದ ಪದಾಽಕಾರಿಗಳಿದ್ದರು.
ಕ್ರೀಡಾಕೂಟದಲ್ಲಿ ೬೮೮ ಪುರುಷ, ೪೩೪ ಮಹಿಳೆಯರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net