ಗೆದ್ಲೆಹಳ್ಳಿ ಮೊರಾರ್ಜಿ ಶಾಲೆ ಅವ್ಯವಸ್ಥೆಯ ಆಗರ

31 ckm 11 sameeulla
ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್‌ರೈಟ್ಸ್ನ ಮುಖಂಡ ಮಹಮ್ಮದ್ ಸಮೀವುಲ್ಲಾ
Published on

ಚಿಕ್ಕಮಗಳೂರು: ಕಡೂರು ತಾಲೂಕಿನ ಗೆದ್ಲೆಹಳ್ಳಿಯ ಮೊರಾರ್ಜಿದೇಸಾಯಿ ವಸತಿಶಾಲೆ ಅವ್ಯವಸ್ಥೆಯ ಆಗರವಾಗಿದೆ ಎಂದು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್‌ರೈಟ್ಸ್ನ ಮುಖಂಡ ಮಹಮ್ಮದ್ ಸಮೀವುಲ್ಲಾ ಮತ್ತು ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಸದಸ್ಯೆ ಆಶಾಸಂತೋಷ್ ಆರೋಪಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಸತಿಶಾಲೆಯಲ್ಲಿ ೬ನೇ ತರಗತಿಯಿಂದ ೧೨ನೇ ತರಗತಿವರೆಗೆ ಒಟ್ಟು ೩೫೦ ವಿದ್ಯಾರ್ಥಿಗಳಿದ್ದಾರೆ. ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸಾರ್ವಜನಿಕರ ದೂರಿನ ಮೇರೆಗೆ ವಸತಿ ಶಾಲೆಗೆ ಭೇಟಿ ನೀಡಿದಾಗ ಸಮಸ್ಯೆಗಳು ಕಂಡುಬAದಿವೆ ಎಂದು ತಿಳಿಸಿದರು.

ಕಳೆದೆರಡು ತಿಂಗಳಿನಿAದ ಬಿಸಿನೀರಿನ ವ್ಯವಸ್ಥೆ ಇಲ್ಲವಾಗಿದೆ. ಮಳೆಗಾಲದ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನ ಮಾಡುವುದರಿಂದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದೆ. ಯುಪಿಎಸ್ ಕೆಟ್ಟು ಹೋಗಿರುವುದರಿಂದ ವಿದ್ಯುತ್ ಸಮಸ್ಯೆ ಉಂಟಾಗಿದೆ. ಗುಣಮಟ್ಟದ ಆಹಾರ ನೀಡುತ್ತಿಲ್ಲ ಎಂದು ದೂರಿದರು.

ವಸತಿ ಶಾಲೆಯ ಮುಖ್ಯಸ್ಥರನ್ನು ಕೇಳಿದಾಗ ಬಿಸಿನೀರಿನ ವ್ಯವಸ್ಥೆ ಇಲ್ಲದಿರುವ, ಯುಪಿಎಸ್ ಕೆಟ್ಟು ಹೋಗಿರುವ ಬಗ್ಗೆ ಸಂಬAಧಿಸಿದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಉತ್ತರಿಸಿದ್ದಾರೆ. ಜಿಲ್ಲಾಧಿಕಾರಿಗಳು ಕೂಡಲೇ ಈ ವಸತಿ ನಿಲಯಕ್ಕೆ ಭೇಟಿನೀಡಿ ಅವ್ಯವಸ್ಥೆಗಳನ್ನು ಸರಿಪಡಿಸಲು ಮುಂದಾಗಬೇಕು ಎಂದು ಮನವಿ ಮಾಡಿದರು.

ಕಳಸ ತಾಲೂಕಿನ ಸಂಸೆ ಗ್ರಾಮದ ದಲಿತ ಯುವಕ ನಾಗೇಶ್ ಮೇಲೆ ಪೊಲೀಸ್ ಸಿಬ್ಬಂದಿ ಹಾಗೂ ಗ್ರಾಮದ ಇಬ್ಬರು ಯುವಕರು ವಿನಾಕಾರಣ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ. ಆದರೆ ಪೊಲೀಸ್ ಸಿಬ್ಬಂದಿ ಅಧಿಕಾರ ದುರುಪಯೋಗಪಡಿಸಿಕೊಂಡು ನಾಗೇಶ್ ಮೇಲೆಯೇ ಪ್ರಕರಣ ದಾಖಲಿಸಿದ್ದಾರೆ. ಕೂಡಲೇ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಹಲ್ಲೆಯಿಂದಾಗಿ ನಾಗೇಶ್ ಅವರ ಕಣ್ಣಿಗೆ ತೀವ್ರ ತರದ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ನಾಗೇಶ್ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಗೇಶ್ ಮೇಲೆ ಹಲ್ಲೆಗೆ ಕಾರಣರಾದ ಪೊಲೀಸ್ ಪೇದೆಯನ್ನು ಸೇವೆಯಿಂದಲೇ ವಜಾಗೊಳಿಸಬೇಕು. ಇಲ್ಲದಿದ್ದಲ್ಲಿ ಹೋರಾಟ ರೂಪಿಸುವುದಾಗಿ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಟಿಯಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾಸಂಚಾಲಕ ಸಂತೋಷ್, ಪ್ರಮುಖರಾದ ನದಿಮ್ ಪಾಷ, ಶ್ರೀನಿವಾಸ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net