

ಚಿಕ್ಕಮಗಳೂರು: ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಚಿಕ್ಕಮಗಳೂರು ಜಿಲ್ಲೆಯವರೇ ಆದ ಹೆಮ್ಮೆಯ ಸಾಹಿತಿ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅವರು ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನಾ ಸಮಾರಂಭವನ್ನು ಡಿ. ೧೦ರಂದು ಸಂಜೆ ೬ ಗಂಟೆಗೆ ನಗರದ ಕುವೆಂಪು ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನಾಧ್ಯಕ್ಷರಿಗೆ ಅಭಿನಂದನೆ ಕಾರ್ಯಕ್ರಮದ ಜೊತೆಗೆ ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಉದ್ಘಾಟಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದು, ಸಾಹಿತಿ ಡಾ.ಎಚ್.ಎಸ್.ಸತ್ಯನಾರಾಯಣ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಖ್ಯಾತ ವೈದ್ಯ ಡಾ.ಜೆ.ಪಿ.ಕೃಷ್ಣೇಗೌಡ ಅವರು ಸಮ್ಮೇಳನಾಧ್ಯಕ್ಷರನ್ನು ಅಭಿನಂದಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಐಟಿ ಪ್ರಾಚಾರ್ಯ ಡಾ. ಸಿ.ಟಿ.ಜಯದೇವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಸಿ.ರಮೇಶ್, ಕಸಾಪ ತಾಲೂಕು ಅಧ್ಯಕ್ಷ ಬಿ.ಎಚ್. ಸೋಮಶೇಖರ್ ಉಪಸ್ಥಿತರಿರಲಿದ್ದಾರೆ ಎಂದರು.
ಸಮ್ಮೇಳನಾಧ್ಯಕ್ಷರೊAದಿಗೆ ಸಂವಾದ ಕಾರ್ಯಕ್ರಮದಲ್ಲಿ ಪ್ರಮುಖರಾದ ಸ.ಗಿರಿಜಾಶಂಕರ್, ಡಾ.ಪುಷ್ಪಾ ಭಾರತಿ, ಎ.ಸಿ.ಚಂದ್ರಪ್ಪ, ಬಿ.ತಿಪ್ಪೇರುದ್ರಪ್ಪ, ಡಾ.ಬೆಳವಾಡಿ ಮಂಜುನಾಥ್, ಎಚ್.ಎಂ.ರುದ್ರಸ್ವಾಮಿ, ಪ್ರೊ.ಜೆ.ಕೆ.ಭಾರತಿ, ಬಾಲು ಮಚ್ಚೇರಿ ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಬಿಸಿಲೆಹಳ್ಳಿ ಸೋಮಶೇಖರ್, ವೀಣಾ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.