

ಬೀದರ್: ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಗೊಂಡ ಸಮಾಜದ 13 ಮಂದಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಬರುವ ವಿಧಾನಸಭೆ ಚುನಾವಣೆಯಲ್ಲಿ ಸಮಾಜಕ್ಕೆ ಜಿಲ್ಲೆಗೊಂದು ಟಿಕೆಟ್ ಕೊಡಬೇಕು ಎಂದು ಒತ್ತಾಯಿಸಿ ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಸಿದ್ದರಾಮಯ್ಯ ಅವರು ತಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮಲ್ಲಿಕಾರ್ಜುನ ಬಿರಾದಾರ ತಿಳಿಸಿದ್ದಾರೆ.