ಗೊಂದಲ ನಿವಾರಣೆಗೆ ಜನಸಂಪರ್ಕ ಕಾರ್ಯಕ್ರಮ

CTD NEWS TAX-----------
Published on

ಚಿತ್ರದುರ್ಗ: ಆದಾಯ ತೆರಿಗೆ ನೀತಿ, ನಿಬಂಧನೆ ಹಾಗೂ ತಿದ್ದುಪಡಿಗಳ ಕುರಿತಂತೆ ತೆರಿಗೆ ಪಾವತಿದಾರರು, ವ್ಯಾಪಾರಿಗಳು ಹಾಗೂ ಚಾರ್ಟೆಡ್ ಅಕೌಂಟೆಂಟ್‌ಗಳೊಂದಿಗೆ ಸಂವಹನ ನಡೆಸಲು ರಾಜ್ಯದ ವಿವಿಧ ನಗರಗಳಲ್ಲಿ ಜನಸಂಪರ್ಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಬೆಂಗಳೂರು ವಿಭಾಗದ ಸಹಾಯಕ ಆಯುಕ್ತ ಪಂಕಜ್ ದ್ವಿವೇದಿ ಹೇಳಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಗುರುವಾರ ಈ ಕುರಿತು ಆಯೋಜಿಸಿದ್ದ ಜನ ಸಂಪರ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತೆರಿಗೆ ಪಾವತಿಗೆ ಸಂಬಂಧಿಸಿದ ಎಲ್ಲ ಕಾರ್ಯಗಳನ್ನು ಆನ್‌ಲೈನ್ ಮೂಲಕ ನಿರ್ವಹಿಸಬಹುದಾಗಿದೆ. ಈ ವೇಳೆ ಸಾಕಷ್ಟು ಪ್ರಶ್ನೆಗಳು ಎದುರಾಗುವುದು ಸಹಜ. ಇಂತಹ ಪ್ರಶ್ನೆಗಳಿಗೆ ಉತ್ತರಿಸುವುದು, ಗೊಂದಲಗಳನ್ನು ನಿವಾರಿಸುವುದು ಕಾರ್ಯಕ್ರಮದ ಉದ್ದೇಶ ಎಂದರು.

ಬೆಂಗಳೂರಿನ ಆದಾಯ ತೆರಿಗೆ ಇಲಾಖೆ ಅಧಿಕಾರಿ ರಮಾಮಣಿ ಮಾತನಾಡಿ, ತೆರಿಗೆಯು ದೇಶ ನಿರ್ಮಾಣಕ್ಕೆ ನಾವು ನೀಡುವ ಕೊಡುಗೆಯಾಗಿದೆ ಎಂದರು.

ದಾವಣಗೆರೆ ಚಾರ್ಟೆಡ್ ಅಕೌಂಟೆಂಟ್ ಅಸೋಶಿಯೇಷನ್ ಉಪಾಧ್ಯಕ್ಷ ಕೆ. ಮಧುಪ್ರಸಾದ್, ಚಿತ್ರದುರ್ಗ ಟ್ಯಾಕ್ಸ್ ಪ್ರಾಕ್ಟೀಷನರ್ ಅಸೋಶಿಯೇಷನ್ ಅಧ್ಯಕ್ಷ ಎಸ್.ಗೋವಿಂದ ರೆಡ್ಡಿ, ಚಾರ್ಟೆಡ್ ಅಕೌಂಟೆಂಟ್ ಕಾರ್ತಿಕ್, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಾದ ಸುಬ್ಬರಾಜು, ಎಂ. ಅಜ್ಜಣ್ಣ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net