ಗೊಂದಿ ಅಣೆಕಟ್ಟೆ ಅಭಿವೃದ್ಧಿಗೆ ಚಿಂತನೆ

27bdvt1
Published on

ಭದ್ರಾವತಿ: ಗೊಂದಿ ಅಣೆಕಟ್ಟೆ ಪ್ರದೇಶವನ್ನು ಪ್ರವಾಸೋದ್ಯಮ ಸ್ಥಳವನ್ನಾಗಿ ಅಭಿವೃದ್ಧಿಪಡಿಸಲು ಚಿಂತನೆ ನಡೆಸಲಾಗಿದೆ ಎಂದು ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ತಿಳಿಸಿದರು.

ಪ್ರಾಧಿಕಾರದ ವ್ಯಾಪ್ತಿಯ ಹಿರಿಯೂರು ಜಿಪಂ ಕ್ಷೇತ್ರದ ಗೊಂದಿ ಗ್ರಾಮದಲ್ಲಿ ಭದ್ರಾ ನದಿಗೆ ಅಡ್ಡಲಾಗಿ ನಿರ್ವಿುಸಿರುವ ಗೊಂದಿ ಅಣೆಕಟ್ಟನ್ನು ಮಂಗಳವಾರ ವೀಕ್ಷಿಸಿ, ಸಹಕಾರ ಸಂಘದ ಅಧ್ಯಕ್ಷರು, ಸದಸ್ಯರು ಮತ್ತು ರೈತರ ಮನವಿ ಸ್ವೀಕರಿಸಿ ಮಾತನಾಡಿದರು.

ಅಣೆಕಟ್ಟನ್ನು ಅಭಿವೃದ್ಧಿಪಡಿಸುವುದರಿಂದ ಈ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಬಲ ನೀಡಿದಂತಾಗುತ್ತದೆ. ಅಲ್ಲದೆ ನೂರಾರು ಜನರ ನಿತ್ಯ ಜೀವನಕ್ಕೆ ಅನುಕೂಲವಾಗಲಿದೆ. ಸ್ಥಳೀಯ ಆಡಳಿತ ಹಾಗೂ ರಾಜ್ಯ ಸರ್ಕಾರಕ್ಕೆ ಲಕ್ಷಾಂತರ ರೂ. ಆದಾಯ ಬರುತ್ತದೆ. ಈ ವಿಚಾರವನ್ನು ಶೀಘ್ರ ಸರ್ಕಾರದ ಗಮನಕ್ಕೆ ತರುತ್ತೇನೆ ಎಂದರು.

ಜಲಾಶಯ ಉನ್ನತೀಕರಿಸುವುದರಿಂದ ಸುತ್ತಲಿರುವ 11 ನೀರು ಬಳಕೆದಾರರ ಸಹಕಾರ ಸಂಘ, ಸಾವಿರಾರು ರೈತರಿಗೆ ಅನುಕೂಲವಾಗುತ್ತದೆ. ಹಾಗಾಗಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಹಾಗೂ ಲೋಕಸಭಾ ಸದಸ್ಯರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಕಾಡಾ ನಿರ್ದೇಶಕ ಷಡಾಕ್ಷರಿ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಧನುಷ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net