ಗೋಣಿಕೊಪ್ಪದಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡಲಿ

04 vtp 1 press meet
Published on

ವಿರಾಜಪೇಟೆ: ಗೋಣಿಕೊಪ್ಪದಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮಳವಂಡ ಅರವಿಂದ್ ಕುಟ್ಟಪ್ಪ ಆಗ್ರಹಿಸಿದ್ದಾರೆ.

ಗೋಣಿಕೊಪ್ಪ ವಾಣಿಜ್ಯ ನಗರಿಯಾಗಿದ್ದು, ಪ್ರತಿದಿನ ಸಾವಿರಾರು ಜನರು ಬಂದು ಹೋಗುತ್ತಾರೆ. 100ಕ್ಕೂ ಅಧಿಕ ಖಾಸಗಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳು ಬಂದು ಹೋಗುತ್ತಿವೆ. ಆದರೆ, ನಿಲುಗಡೆ ಮಾಡಲು ನಿಲ್ದಾಣ ಇಲ್ಲವೇ ಇಲ್ಲ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಪಟ್ಟಣದ ಸುತ್ತಮುತ್ತಲಿನ ವಾರ್ಡ್‌ಗಳಲ್ಲಿ ಗುಡಿಸಿಲಿನಲ್ಲಿ ವಾಸ ಮಾಡುತ್ತಿರುವ 198 ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿಕೊಡಬೇಕು. 12 ವರ್ಷದ ಹಿಂದೆ ಪಟ್ಟಣ ಹಾಗೂ ಹೊಸೂರು, ಹಾತೂರು ಅರುವತೋಕ್ಲು ಗ್ರಾಮ ಪಂಚಾಯಿತಿಗಳಿಗೆ ಕುಡಿಯುವ ನೀರಿನ ಯೋಜನೆಯನ್ನು ಶೀಘ್ರ ಕಾರ್ಯಗತ ಮಾಡಬೇಕು. ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಬೇಕು ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳನ್ನು ಆಗ್ರಹಿಸಿದರು.

ಕಾನೂನು ಘಟಕದ ಮಾಜಿ ಅಧ್ಯಕ್ಷ ಡಿ.ಸಿ.ಧ್ರುವ, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜಿ.ಜಿ.ಮೋಹನ್, ಕಾಂಗ್ರೆಸ್ ಮುಖಂಡರಾದ ಮರ‌್ವೀನ್ ಲೋಬೋ, ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷ ಹರ್ಷದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net