

ಗುಂಡ್ಲುಪೇಟೆ : ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಭಾನುವಾರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆದರು. ಈ ಬಾರಿ ಉತ್ತಮ ಮಳೆಬಿದ್ದು ರೈತಾಪಿ ಜನರಿಗೆ ಸಮೃದ್ಧಿ ತರಲಿ ಎಂದು ಪ್ರಾರ್ಥಿಸಿದರು.
ಶಾಸಕರಾದ ನಂತರ ಇದೇ ಮೊದಲ ಬಾರಿಗೆ ಆಗಮಿಸಿದ ಅವರನ್ನು ದೇವಾಲಯದ ಪ್ರಧಾನ ಅರ್ಚಕ ಗೋಪಾಲಕೃಷ್ಣಭಟ್ ಸಾಂಪ್ರದಾಯಿಕವಾಗಿ ಸ್ವಾಗತಿಸಿ, ಪೂಜೆ ನೆರವೇರಿಸಿದ ಪ್ರಸಾದ ನೀಡಿದರು. ಜಿಪಂ ಮಾಜಿ ಸದಸ್ಯ ಕೆ.ಎಸ್.ಮಹೇಶ್, ಪುರಸಭೆ ಸದಸ್ಯ ಮಧು, ಜಿ.ಕೆ.ಲೋಕೇಶ್ ಸೇರಿದಂತೆ ಹಲವರು ಇದ್ದರು.