ಗೋವುಗಳ ಮಾರಣ ಹೋಮ ಖಂಡನೀಯ

manu
ಮನು
Published on

ಅರಸೀಕೆರೆ: ಭಾರತೀಯ ಸನಾತನ ಧರ್ಮದ ಪ್ರತೀಕದಂತಿರುವ ಗೋವುಗಳ ಮಾರಣ ಹೋಮ ಖಂಡನೀಯ ಎಂದು ಹಿಂದು ಜಾಗರಣಾ ವೇದಿಕೆ ತಾಲೂಕು ಅಧ್ಯಕ್ಷ ಮನು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರ ಸೇರಿದಂತೆ ತಾಲೂಕಿನ ವಿವಿಧ ಹೋಬಳಿ ಕೇಂದ್ರಗಳಲ್ಲಿ ನಡೆಯುವ ವಾರದ ದನದ ಸಂತೆಗಳು ದಂಧೆಕೋರರ ಹಾಟ್‌ಸ್ಪಾಟ್ ಆಗಿ ಮಾರ್ಪಟ್ಟಿರುವುದು ದುರದೃಷ್ಟಕರ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಹಾಸನ ರಸ್ತೆಗೆ ಹೊಂದಿಕೊಂಡಂತಿರುವ ಕೆಲ ಬಡಾವಣೆ ಹಾಗೂ ಮುಜಾವರ್ ಮೊಹಲ್ಲಾದಲ್ಲಿ ನಿತ್ಯವೂ ಎಗ್ಗಿಲ್ಲದೆ ಜಾನುವಾರುಗಳನ್ನು ಕತ್ತರಿಸಿ ಮಾಂಸ ಮಾರಾಟ ಮಾಡಲಾಗುತ್ತಿದೆ. ಅಲ್ಲದೆ ಅಯ್ಯಪ್ಪಸ್ವಾಮಿ ದೇಗುಲದ ಬಳಿ ಬುಧವಾರ ಬೆಳಗ್ಗೆ ನಡೆಯುವ ದನದ ಸಂತೆಯಿಂದ ಕೇರಳ ಹಾಗೂ ಇನ್ನಿತರ ರಾಜ್ಯಗಳಿಗೆ ಕದ್ದು ಮುಚ್ಚಿ ಗೋ ಸಂಪತ್ತನ್ನು ಮಾರಾಟ ಮಾಡುತ್ತಿರುವುದು ಜಗಜ್ಜಾಹೀರಾಗಿದೆ. ಪರಿಸ್ಥಿತಿ ಹೀಗಿದ್ದರೂ ತಾಲೂಕು ಹಾಗೂ ಜಿಲ್ಲಾಡಳಿತ ದುರಳರ ವಿರುದ್ಧ ಕ್ರಮ ಜರುಗಿಸದಿರುವುದು ಅಕ್ಷಮ್ಯ. ಗೋಹತ್ಯೆ ತಡೆಗಟ್ಟುವಲ್ಲಿ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.

ಮುಖಂಡರಾದ ಸುರೇಶ್, ದೀಪಕ್, ಲೋಕೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net