ಗೌಡಳ್ಳಿ ಕೃಷಿ ಪತ್ತಿನ ಸಂಘದಿಂದ ಮಳೆಗಾಗಿ ಪ್ರಾರ್ಥನೆ

29ss1pooje
Published on

ಶನಿವಾರಸಂತೆ: ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಮಳೆಗಾಗಿ ಸಮೀಪದ ಮಾಲಂಬಿ ಮಳೆ ಮಲ್ಲೇಶ್ವರಬೆಟ್ಟ ಶ್ರೀ ಮಳೆ ಮಲ್ಲೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.


ಸಮೀಪದ ಗೌಡಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಇದುವರೆಗೂ ಮಳೆಯಾಗದ ಹಿನ್ನೆಲೆಯಲ್ಲಿ ರೈತರು ಮತ್ತು ಜನರು ಬಿಸಿಲಿನ ಬೇಗೆಗೆ ತತ್ತರಿಸಿದು, ಮಳೆಗಾಗಿ ಕಾಯುತ್ತಿದ್ದಾರೆ.

ಎರಡು ಮೂರು ದಿನಗಳಿಂದ ಗೌಡಳ್ಳಿ ವ್ಯಾಪ್ತಿ ಹೊರತುಪಡಿಸಿದಂತೆ ಬೇರೆಡೆ ಸ್ವಲ್ಪ ಮಟ್ಟಿಗೆ ಮಳೆಯಾಗಿದೆ. ಗೌಡಳ್ಳಿ ವ್ಯಾಪ್ತಿಯಲ್ಲಿ ಮೋಡ ಕವಿದ ವಾತಾವರಣ ಇದ್ದರೂ ಮಳೆಯಾಗದಿರುವ ಹಿನ್ನೆಲೆಯಲ್ಲಿ ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರು ಶನಿವಾರ ಹತ್ತಿ ಬೆಟ್ಟದ ಮಳೆ ಮಲ್ಲೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಮಳೆಗಾಗಿ ಪ್ರಾರ್ಥಿಸಿದರು.

ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಎಸ್.ಪಿ.ಭರತ್‌ಕುಮಾರ್, ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕರಾದ ಸುರೇಶ್, ದಿನೇಶ್, ಪ್ರಮುಖರಾದ ಪುಷ್ಪಾ ಸುರೇಶ್, ಹಂಸ ಭರತ್, ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪೊನ್ನಪ್ಪ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net