

ಈಚೆಗೆ ಮೈಸೂರು ಮಾನಸ ಗಂಗೋತ್ರಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ನೀಡಿದ ಗೌರವ ಡಾಕ್ಟರೇಟ್ ಪದವಿಯನ್ನು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನಿರಾಕರಿಸಿ ಪದವಿಯನ್ನು ಹಿಂಪಡೆಯುವಂತೆ ವಿವಿ ಗೆ ಪತ್ರ ಬರೆದಿದ್ದಾರೆ.
ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಮತ್ತು ವ್ಯವಸ್ಥಾಪನ ಮಂಡಳಿ ಸದಸ್ಯರ ವತಿಯಿಂದ ಕಳೆದ ಮಾ.27 ರಂದು ವಿಶ್ವವಿದ್ಯಾನಿಲಯದ “ಗೌರವ ಡಾಕ್ಟರೇಟ್ ಡಿ.ಲಿಟ್.” ಗೌರವ ಪದವಿಯನ್ನು ನೀಡುವುದರ ಮೂಲಕ ಸನ್ಮಾನಿಸಿದ ವ್ಯವಸ್ಥಾಪನ ಮಂಡಳಿಗೆ ನಾನು ಆಭಾರಿಯಾಗಿದ್ದೇನೆ. ಗೌರವ ಡಾಕ್ಟರೇಟ್ ಪದವಿಯನ್ನು ನನಗೆ ಪ್ರಧಾನಿಸುವ ಮೂಲಕ ತಾವು ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. ಆದರೆ ಸಾಮಾಜಿಕ ಸೇವೆಯಲ್ಲಿ ನಾನು ಕೈಗೊಂಡಿರುವ ಕಾರ್ಯಕ್ರಮಗಳನ್ನು ಸಫಲಗೊಳಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿಕೊಂಡಿರುತ್ತೇನೆ. ಆದರೆ ಅದನ್ನು ಕಾರ್ಯರೂಪಕ್ಕೆ ತರುವಂತಹ ಗುರುತರವಾದಂತಹ ಹೊಣೆಗಾರಿಕೆ ನನ್ನ ಮೇಲಿದ್ದು, ಇದಕ್ಕೆ ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಿದ್ದು,ಆದ್ದರಿಂದ ವಿವಿಯಿಂದ ನೀಡಿರುವ ಗೌರವ ಡಾಕ್ಟರೇಟ್ ಪದವಿ ಹಿಂಪಡೆಯುವಂತೆ ವಿವಿ ಉಪ ಕುಲಪತಿ ಅವರಿಗೆ ಪತ್ರ ಬರೆದಿದ್ದಾರೆ.