ಗ್ಯಾರಂಟಿ ಅತ್ಯಂತ ಜನಪರ ಯೋಜನೆ

Madhubangarappa
Published on

ಚಿತ್ರದುರ್ಗ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆ ದೇಶದಲ್ಲಿ ಈವರೆಗೂ ಆಡಳಿತ ನಡೆಸಿರುವ ಯಾವ ಸರ್ಕಾರಗಳಿಂದಲೂ ಸಾಧ್ಯವಾಗಿಲ್ಲ ಎಂದು ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಉತ್ತಮ ಯೋಜನೆ ರೂಪಿಸಿ ಜನಪರವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಪಕ್ಷಕ್ಕೆ ಹೆಚ್ಚು ಬಲಬಂದಿದೆ ಎಂದರು.

ಮುಂಬರುವ ತಾಪಂ, ಜಿಪಂ, ಲೋಕಸಭಾ ಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರನ್ನು ಗೆಲ್ಲಿಸುವಲ್ಲಿ ಮುಖಂಡರು, ಕಾರ್ಯಕರ್ತರು ಈಗಿನಿಂದಲೇ ಶ್ರಮಿಸುವ ಮೂಲಕ ಶಕ್ತಿ ತುಂಬಬೇಕು ಎಂದು ಸಲಹೆ ನೀಡಿದರು.

ಮಾಜಿ ಸಚಿವ ಎಚ್.ಆಂಜನೇಯ, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಪಕ್ಷದ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್, ಪದಾಧಿಕಾರಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್‌ಕುಮಾರ್, ರೇಣುಕ, ಶಿವು, ರವಿಕುಮಾರ್, ಆರ್.ಗಂಗಾಧರ್, ಎನ್.ಡಿ.ಕುಮಾರ್, ಮುನಿರಾ ಎ.ಮಕಾಂದಾರ್, ಸೈಯದ್ ಖುದ್ದೂಸ್, ಕಿರಣ್, ಇಂದಿರಾ, ಸ್ವಾಮಿ, ನಗರಸಭೆ ಸದಸ್ಯರಾದ ಮೀನಾಕ್ಷಿ, ವೆಂಕಟೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net