ಗ್ಯಾರಂಟಿ ಫಲಾನುಭವಿಗಳ ಸಮೀಕ್ಷೆ ಪ್ರಾರಂಭ

Image 2024-02-26 at 5.02.34 PM---00008
Published on

ಚಿತ್ರದುರ್ಗ: ರಾಜ್ಯ ಸರ್ಕಾರದ ಐದು ‘ಗ್ಯಾರಂಟಿ’ ಯೋಜನೆಯ ಫಲಾನುಭವಿಗಳ ಸಮೀಕ್ಷೆ ಜಿಲ್ಲೆಯಲ್ಲಿ ಸೋಮವಾರ ಪ್ರಾರಂಭಗೊಂಡಿದೆ. ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಸೇರಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸ್ಪಷ್ಟ ಚಿತ್ರಣಕ್ಕಾಗಿ ಸರ್ಕಾರ ಸಮೀಕ್ಷೆ ಕೈಗೊಂಡಿದೆ.
ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆ, ಮನೆಗೆ ತೆರಳಿ ಮೊಬೈಲ್/ವೆಬ್ ಮೂಲಕ ಸಮೀಕ್ಷೆ ನಡೆಸಲಿದ್ದಾರೆ. ಯೋಜನೆಗಳು ತಲುಪಿರುವ ಮತ್ತು ತಲುಪದಿರುವ ಕುಟುಂಬಗಳ ಸಮೀಕ್ಷೆ ಕೂಡ ನಡೆಯಲಿದೆ. ಯೋಜನೆಗಳು ತಲುಪದೆ ಇರುವ ಕುಟುಂಬಗಳ ಸಂಖ್ಯೆ ಮತ್ತು ಕಾರಣ ತಿಳಿಯಲು ಈ ಸಮೀಕ್ಷೆ ನೆರವಾಗಲಿದೆ. ಜಾನುಕೊಂಡ, ಮೆದೇಹಳ್ಳಿ, ಕಣಿವೆಮಾರಮ್ಮ ನಗರ ಮೊದಲಾದೆಡೆ ಸಮೀಕ್ಷೆ ಆರಂಭಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net