ಗ್ಯಾರಂಟಿ ಫಲಾನುಭವಿಗಳ ಸಮೀಕ್ಷೆ ನಡೆಸಿ

CTD 4 CONGRESS--0001
Published on

ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆಗೆ ಆಸಕ್ತಿ ಕಾಂಗ್ರೆಸ್ ಯುವ ಮುಖಂಡ ವಿನಯ್ ತಿಮ್ಮಾಪೂರ ಹೇಳಿಕೆ
ಚಿತ್ರದುರ್ಗ: ರಾಜ್ಯ ಸರ್ಕಾರದ ಗ್ಯಾರೆಂಟಿಗಳು ಪ್ರತಿ ಮನೆಗೆ ತಲುಪಿರುವ ಕುರಿತಂತೆ ಸಮೀಕ್ಷೆ ನಡೆಸುವಂತೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ‌್ಯದರ್ಶಿ ವಿನಯ್ ತಿಮ್ಮಾಪೂರ, ಕಾರ‌್ಯಕರ್ತರಿಗೆ ಸೂಚಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಯುವ ಸಹಾಯ ಹಸ್ತ ಕಾರ‌್ಯಕ್ರಮದಲ್ಲಿ ಮಾತನಾಡಿ, ಸಮೀಕ್ಷೆ ಮೂಲಕ ಫಲಾನುಭವಿಗಳಿಗೆ ಗ್ಯಾರಂಟಿಗಳು ತಲುಪಿರುವ ಕುರಿತು ಖಾತ್ರಿ ಪಡಿಸಿಕೊಳ್ಳಬೇಕಿದೆ ಎಂದರು.
ಸಂವಿಧಾನಶಿಲ್ಪಿ ಡಾ.ಬಿ.ಆ ರ್.ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನದಿಂದಾಗಿ ಬಡವರು, ಶೋಷಿತರು ಇಂದು ಸ್ವಾಭಿಮಾನದಿಂದ ಬದುಕುವಂತಾಗಿದೆ. ಬಿಜೆಪಿ ಜಾತಿ, ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಯುವಕರಿಗೆ ಉದ್ಯೋಗವಿಲ್ಲವಾಗಿದೆ. ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸುತ್ತಿದ್ದಾರೆ ಎಂದು ದೂರಿದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನಾನೂ ಟಿಕೆಟ್ ಆಕಾಂಕ್ಷಿ. ಆದರೆ, ಹೈಕಮಾಂಡ್ ಯಾರಿಗೆ ಟಿಕೆಟ್ ಕೊಡುವುದೋ ಅವರ ಪರವಾಗಿ ಕಾರ‌್ಯಕರ್ತರೆಲ್ಲರೂ ಕೆಲಸ ಮಾಡ ಬೇಕಿದೆ ಎಂದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರೇಹಳ್ಳಿ ಉಲ್ಲಾಸ್ ಮಾತನಾಡಿ, ಗ್ಯಾರಂಟಿಗಳಿಂದ ಬಡವರಿಗೆ ಅನುಕೂಲವಾಗಿದೆ ಎಂದು ಹೇಳಿದರು. ರಾಜ್ಯ ಸೇವಾ ದಳದ ಉಪಾಧ್ಯಕ್ಷ ಪ್ರಕಾಶ್ ಮಾತನಾಡಿದರು. ತಿಪ್ಪೇಸ್ವಾಮಿ, ಅಫೀಜ್, ಶಶಿಕಿರಣ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net