ಗ್ಯಾರಂಟಿ ಯೋಜನೆಗಳ ಜಾಗೃತಿ ವಾಹನಕ್ಕೆ ಚಾಲನೆ

CTD GAYRANTII==
Published on

ಚಿತ್ರದುರ್ಗ: ವಾರ್ತಾ ಇಲಾಖೆ ಜಿಪಂ ಆವರಣದಲ್ಲಿ ಮಂಗಳವಾರ ಗ್ಯಾರಂಟಿ ಯೋಜನೆಗಳ ಜಾಗೃತಿ ವಾಹನಕ್ಕೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ, ಜಿಪಂ ಸಿಇಒ ಎಸ್.ಜೆ. ಸೋಮಶೇಖರ್ ಹಸಿರು ನಿಶಾನೆ ತೋರಿಸಿದರು.

ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳ ಕುರಿತು ವಾಹನ ಜಿಲ್ಲಾದ್ಯಂತ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಲಿದೆ.

ಈ ವೇಳೆ ಮಾತನಾಡಿದ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಆರ್. ಶಿವಣ್ಣ, ಜನರ ಆರ್ಥಿಕ, ಸಾಮಾಜಿಕ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರನ್ನು ತಲುಪುತ್ತಿವೆ ಎಂದರು.

ಈ ವಾಹನ ಜಿಲ್ಲೆಯಲ್ಲಿ 5 ದಿನಗಳ ಕಾಲ ಆಯ್ದ 20ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಲಿದೆ. ವಾಹನದೊಂದಿಗೆ ಜಾನಪದ ಸಂಗೀತ ಕಲಾವಿದರೂ ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ವಾರ್ತಾಧಿಕಾರಿ ಬಿ.ವಿ. ತುಕಾರಾಂರಾವ್ ಹೇಳಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ತಾಲೂಕು ಅಧ್ಯಕ್ಷ ಪ್ರಕಾಶ್, ಸದಸ್ಯರಾದ ಅಬ್ದುಲ್ಲ, ಮುದಸಿರ್, ಜೆ.ಎಂ. ತಿಪ್ಪೇಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ. ಗುರುನಾಥ, ಡಿಎಚ್‌ಒ ಡಾ.ಜಿ.ಪಿ. ರೇಣುಪ್ರ ಸಾದ್, ಶಿಕ್ಷಣ ಇಲಾಖೆ ಡಿವೈಪಿಸಿ ವೆಂಕಟೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ. ಗಿರೀಶ್,ಮಂಜುನಾಥ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net