ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿ: ಅಧಿಕಾರಿಗಳಿಗೆ ದುರುಗೇಶ ಸೂಚನೆ

oplus_2
oplus_2
Published on

ರಾಯಚೂರು: ಜನರಿಗೆ ನೆರವಾಗುವ ನಿಟ್ಟಿನಲ್ಲಿ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಶ್ರಮಿಸಬೇಕು. ಅಲ್ಲದೆ ಅರ್ಹ ಫಲಾನುಭವಿಗಳು ಯೋಜನೆಯಿಂದ ವಂಚಿತವಾಗಬಾರದು ಈ ಬಗ್ಗೆ ಅಗತ್ಯ ಕ್ರಮವಹಿಸಬೇಕೆಂದು ರಾಯಚೂರು ತಾಲೂಕು ಉಸ್ತುವಾರಿ ಅಧಿಕಾರಿ ಡಾ.ಕೆ.ಆರ್.ದುರುಗೇಶ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರ ಯೋಜನೆಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸಲು ಅಧಿಕಾರಿಗಳು ಮುಂದಾಗಬೇಕು ಜತೆಗೆ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ, ತಾಲೂಕು ಪಂಚಾಯತಿ ಇಒ ಚಂದ್ರಶೇಖರ ಪವಾರ್, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಶ್ರೀಶೈಲ, ಹಿಂದುಳಿದ ವರ್ಗಗಳ ತಾಲೂಕು ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ರೆಡ್ಡಿ, ಅಲ್ಪಸಂಖ್ಯಾತರ ಲಾಖೆಯ ತಾಲೂಕು ವಿಸ್ತರಣಾಧಿಕಾರಿ ನರಸಿಂಹ ನಾಯಕ, ನಿಲಯಪಾಲಕರಾದ ಸುಜಾತ, ರೇವಣ್ಣ ಸಿದ್ದಪ್ಪ, ನಗರಸಭೆ ಸಮುಧಾಯ ಸಂಘಟನಾಧಿಕಾರಿ ಕೃಷ್ಣ ಕಟ್ಟಿಮನಿ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net