ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಭದ್ರತೆ

bkt-7-4
Published on

ಬಾಗಲಕೋಟೆ: ಬಡವ, ನಿರ್ಗತಿಕ, ಅಂಗವಿಕಲ, ಅನಾಥರಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಸಹಕಾರಿಯವಾಗಿವೆ. ದೇವರು, ಸೈನಿಕರು, ದೇಶಪ್ರೇಮ ಹೆಸರಿನಲ್ಲಿ ಕಾಂಗ್ರೆಸ್ ಮತಗಳಿಕೆ, ಅಽಕಾರದ ಹಪಾಹಪಿ ಮಾಡುವದಿಲ್ಲ. ಜನರ ಏಳಿಗೆ ಬಯಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

ನವನಗರದ ಸೆಕ್ಟರ ನಂ.೧೧೦ ರಿಂದ ೧೧೨ರಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಹಮ್ಮಿಕೊಂಡ ಸರ್ಕಾರದ ಮಹಾತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ರಚನೆಯಾದ ನಂತರ ಪಂಚ ಗ್ಯಾರಂಟಿಗಳ ಬಗ್ಗೆ ನಮ್ಮ ಸಂಪುಟದ ಸಚಿವರಲ್ಲಿಯೇ ಗೊಂದಲ ಉಂಟಾಗಿತ್ತು. ಆದರೆ ಮುಖ್ಯಮಂತ್ರಿಗಳು ತಮ್ಮ ಮನಸ್ಸಿನಲ್ಲಿರುವ ಗುಟ್ಟು ಮಾತ್ರ ಬಿಟ್ಟುಕೊಡದೇ ರಾಜ್ಯದ ಎಲ್ಲ ಜನತೆಗೆ ಯೋಜನೆಗಳ ಜಾರಿಗೆ ತರುವುದೇ ಕನಸಾಗಿತ್ತು. ಎಷ್ಟೇ ಖರ್ಚು ಬಂದರು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದರು.

ಶಕ್ತಿ ಯೋಜನೆಯಿಂದಾಗಿ ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ಅನುಕೂಲವಾಗಿದ್ದು, ಇದರಿಂದ ಹಿರಿಯ ಜೀವಿಗಳು ಕ್ಷೇತ್ರ ದರ್ಶನ ಮಾಡಬೇಕೆಂಬ ಹಂಬಲದಿಂದ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ. ತಂದೆ-ತಾಯಂದಿರು, ಮಕ್ಕಳು ಅನ್ನಕ್ಕೆ ಕೈ ಚಾಚಬಾರದೆಂಬ ಉದ್ದೇಶದಿಂದ ಅನ್ನಭಾಗ್ಯ ಯೋಜನೆಯಡಿ ಹೊಟ್ಟೆ ತುಂಬಿಸುವ ಕೆಲಸ ಮಾಡಲಾಗಿದೆ. ಕತ್ತಲ ಬದುಕಬಾರದೆಂಬ ಉದ್ದೇಶದಿಂದ ೨೦೦ ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಗ್ಯಾರಂಟಿಗಳ ಯಶಸ್ವಿಯಲ್ಲಿ ಅಽಕಾರಿಗಳ ಶ್ರಮ ಅಡಗಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಮಾತನಾಡಿ, ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಚಾಚು ತಪ್ಪದೇ ಪಾಲನೆ ಮಾಡಿದ್ದೇವೆ. ಪಂಚ ಗ್ಯಾರಂಟಿ ಯೋಜನೆಗಳಿಗೆ ೩೭ ಸಾವಿರ ಕೋಟಿ ರೂ. ಖರ್ಚು ಮಾಡಿ ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡಲಾಗಿದೆ. ಪ್ರಸಕ್ತ ಬಜೆಟ್‌ನಲ್ಲಿ ೫೨ ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಿದ್ದು, ಎಲ್ಲರಿಗೂ ತಲುಪಿಸುವ ಪ್ರಯತ್ನ ಮಾಡಲಾಗಿದೆ ಎಂದು ತಿಳಿಸಿದರು.

ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ ಮಾತನಾಡಿ, ಮಹಿಳೆಯರಲ್ಲಿ ಭಕ್ತಿ, ಭಾವ, ವಿಶ್ವಾಸ ಇರುತ್ತದೆ ಎಂಬ ಉದ್ದೇಶದಿಂದ ೫ ಗ್ಯಾರಂಟಿ ಯೋಜನೆಗಳ ಪೈಕಿ ೪ ಯೋಜನೆಗಳು ಮಹಿಳೆಯರಿಗೆ ನೀಡಲಾಗಿದೆ. ಈ ಯೋಜನೆಗಳಿಂದ ತಿಂಗಳಿಗೆ ೫ ಸಾವಿರ ರೂ, ವರ್ಷಕ್ಕೆ ೬೦ ಸಾವಿರ ಹಾಗೂ ೫ ವರ್ಷಕ್ಕೆ ೩ ಲಕ್ಷ ರೂ. ಒಂದು ಕುಟುಂಬಕ್ಕೆ ತಲುಪಲಿದೆ. ಗ್ಯಾರಂಟಿಗಳಿಂದ ಸರ್ಕಾರ ದಿವಾಳಿ ಆಗಲಿದೆ ಅಂಟ ಟೀಕಿಸಿದರು. ಇಂದು ವಿರೋಽಗಳಿಗೆ ಸತ್ಯ ಅರಿವು ಆಗಿದೆ. ಇಂತಹ ಕಾರ್ಯ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಹೇಳಿದರು.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಡಿಸಿ ಜಾನಕಿ ಕೆ.ಎಂ ಮಾತನಾಡಿದರು. ಜಿ.ಪಂ ಸಿಇಒ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಅಮರನಾಥ ರೆಡ್ಡಿ, ಯುಕೆಪಿ ಮಹಾವ್ಯವಸ್ಥಾಪಕ ರಮೇಶ ಕಳಸದ, ಅಪರ ಜಿಲ್ಲಾಽಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಽಕಾರಿಗಳಾದ ಅಶೋಕ ಜಗಲಾಸರ, ಸಂತೋಷ ಕಾಮಗೌಡ ಸೇರಿದಂತೆ ಆಯಾ ತಾಲೂಕಿನ ತಹಸೀಲ್ದಾರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net