

ರಾಯಚೂರು: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾಗಿರುವ ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನವನ್ನು ಸರ್ಕಾರ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಲು ನಿರ್ಧರಿಸಿರುವುದನ್ನು ಕೈಬಿಡಬೇಕು ಎಂದು ಮೂಲ ನಿವಾಸಿ ಅಂಬೇಡ್ಕರ್ ಸಂಘ ಒತ್ತಾಯಿಸಿದೆ.
ಸಂಘದ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನವನ್ನು ಕೇವಲ ಪರಿಶಿಷ್ಟ ಜಾತಿ, ಪಂಗಡದವರ ಏಳಿಗೆ ಮತ್ತು ಅಭಿವೃದ್ಧಿಗೆ ಮಾತ್ರ ಬಳಕೆ ಮಾಡುವಂತೆ ಆಗ್ರಹಿಸಿತು.
ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳಿಗೆ ಬಜೆಟ್‌ನಲ್ಲಿ ಅನುದಾನವನ್ನು ಮೀಸಲಿರಿಸಲಾಗಿದೆ. ಆದರೆ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಅನುದಾನದ ಕೊರತೆ ಎಂದು ಈ ಅನುದಾನವನ್ನು ಬಳಕೆ ಮಾಡಲು ಮುಂದಾಗಿರುವುದು ಪರಿಶಿಷ್ಟರಿಗೆ ಮಾಡುವ ಅನ್ಯಾಯವಾಗಿದೆ.
ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಬೇರೆ ಮೂಲದಿಂದ ಅನುದಾನವನ್ನು ಕ್ರೋಢಿಕರಿಸಬೇಕೆ ಹೊರತು ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನವನ್ನು ಯಾವುದೇ ಕಾರಣಕ್ಕೆ ಬೇರೆ ಯೋಜನೆಗಳಿಗೆ ಬಳಕೆ ಮಾಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಸಂಘದ ಅಧ್ಯಕ್ಷ ಎಂ.ಭರತಕುಮಾರ, ಪದಾಕಾರಿಗಳಾದ ಬಸವರಾಜ ತಳವಾರ, ಆಂಜಿನಯ್ಯ, ಹನುಮೇಶ ಕೊಲಮಿ, ಜಂಬಣ್ಣ, ಬಸವರಾಜ, ಸುಶೀಲಕುಮಾರ, ಶಿವಶಂಕರ, ಮಲ್ಲೇಶ ಇದ್ದರು.