ಗ್ಯಾರಂಟಿ ಯೋಜನೆಯ ಫಲ ಅರ್ಹರಿಗೆ ಲಭಿಸಲಿ

24 gkp 07
Published on

ಗೋಣಿಕೊಪ್ಪ: ಸರ್ಕಾರ ಗ್ಯಾರಂಟಿ ಯೋಜನೆಯ ಮೂಲಕ ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಪಡೆಯಲು ಸರ್ಕಾರ ಹಲವು ಯೋಜನೆ ರೂಪಿಸಿದೆ. ಇದರಲ್ಲಿ ಅನ್ನಭಾಗ್ಯ ಯೋಜನೆಯು ಪ್ರಮುಖವಾಗಿದೆ. ಇದರಿಂದ ಕಷ್ಟದಲ್ಲಿರುವವರಿಗೆ ಈ ಯೋಜನೆ ತಲುಪಬೇಕು. ಆ ನಿಟ್ಟಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕು. ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರು ಈ ನಿಟ್ಟಿನಲ್ಲಿ ತಮ್ಮೊಂದಿಗೆ ಸಹಕಾರ ನೀಡಲಿದ್ದಾರೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಕಾಳಿಮಾಡ ಪ್ರಶಾಂತ್ ತಾಲೂಕು ಮಟ್ಟದ ಅಧಿಕಾರಿಗಳಿಗೆ ಗುರುವಾರ ನಿರ್ದೇಶನ ನೀಡಿದರು.

ಪೊನ್ನಂಪೇಟೆಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜನೆಗೊಂಡಿದ್ದ ಪೊನ್ನಂಪೇಟೆ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಿಗೆ ಸರ್ಕಾರದ ವತಿಯಿಂದ ಮಂಜೂರಾಗಿರುವ ಐಡಿ ಕಾರ್ಡ್‌ಗಳನ್ನು ವಿತರಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ಲಾಭ ಅರ್ಹರಿಗೆ ಲಭಿಸಲು ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಗ್ರಾಮ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಗೆ ಸದಸ್ಯರನ್ನು ನೇಮಕಗೊಳಿಸಿದೆ. ಇದರಿಂದ ಸ್ಥಳೀಯವಾಗಿ ಯೋಜನೆಯಿಂದ ವಂಚಿತರಾದವರು ಯೋಜನೆಯ ಲಾಭ ಪಡೆಯಲು ಅವಕಾಶ ಕಲ್ಪಿಸಿದೆ. ಈ ನಿಟ್ಟಿನಲ್ಲಿ ಯೋಜನೆಯಿಂದ ಯಾರೂ ಕೂಡ ವಂಚಿತರಾಗಬಾರದು ಎಂಬುದು ಸರ್ಕಾರದ ಮೂಲ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ನಿಭಾಯಿಸುವಂತೆ ತಿಳಿಸಿದರು.

ಫಲಾನುಭವಿಗಳು ಕಚೇರಿಗೆ ಬಂದಾಗ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ ಯೋಜನೆಯ ಲಾಭ ಪಡೆಯಲು ಸಹಕಾರ ನೀಡಬೇಕು ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿಯ ಹಲವು ಸದಸ್ಯರು ಸ್ಥಳೀಯವಾಗಿ ಫಲಾನುಭವಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧ್ಯಕ್ಷರಲ್ಲಿ ವಿವರಿಸಿದರು. ಪೊನ್ನಂಪೇಟೆ ತಾಲೂಕು ಕಾರ್ಯನಿರ್ವಹಣಾಧಿಕಾರಿ ಅಪ್ಪಣ್ಣ ಉಪಸ್ಥಿತರಿದ್ದರು. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ತಾಲೂಕು ಅಧಿಕಾರಿ ಪೂಣಚ್ಚ, ಉದ್ಯೋಗ ವಿನಿಮಯ ಅಧಿಕಾರಿ ರೇಖಾಗಣಪತಿ, ಆಹಾರ ನಿರೀಕ್ಷಕರಾದ ನಿಶಾನ್, ಸೆಸ್ಕ್ ಎಇಇ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net