ಗ್ಯಾರಂಟಿ ಹಣ ಬಾರದ್ದಿದ್ದರೆ ಅಧಿಕಾರಿಗಳ ಗಮನಕ್ಕೆ ತನ್ನಿ

04BTP03
Published on

ಬೆಟ್ಟದಪುರ: ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯಡಿ ಹಣ ಬಾರದೆ ಇರುವ ಫಲಾನುಭವಿಗಳು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು ಎಂದು ಪಶು ಸಂಗೋಪನಾ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್ ಹೇಳಿದರು.


ಪಿರಿಯಾಪಟ್ಟಣ ತಾಲೂಕಿನ ಕಣಗಾಲು ಗ್ರಾಮದಲ್ಲಿ ಸೋಮವಾರ ನೂತನ ಹೈಟೆಕ್ ಪಶು ಆಸ್ಪತ್ರೆ ಕೇಂದ್ರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಬಳಿಕ ಮಾತನಾಡಿದ ಅವರು, ಈಗಾಗಲೇ ತಾಲೂಕಿನಲ್ಲಿ ಎಲ್ಲ ಅಧಿಕಾರಿಗಳೊಂದಿಗೆ ಪ್ರವಾಸ ಕೈಗೊಂಡು, ಪ್ರತಿ ಗ್ರಾಮಗಳಿಗೆ ಭೇಟಿ ನೀಡುವ ಮೂಲಕ ಜನರ ಸ್ಥಳೀಯ ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ. ಸ್ಥಳದಲ್ಲಿ ಸಮಸ್ಯೆ ನಿವಾರಣೆಯಾಗುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಡಿ ಹಣ ಬಾರದೆ ಇರುವವರು ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಣಗಾಲು ವ್ಯಾಪ್ತಿಯ ಜಿ.ಬಿ.ಹೊಸಳ್ಳಿ ಐಚನಹಳ್ಳಿ, ಕೊಟಯ್ಯನಕೊಪ್ಪಲು, ಮನುಗನಹಳ್ಳಿ, ಕೆ.ಬಸವನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಕುಂದುಕೊರತೆ ಸಭೆ ನಡೆಸಿ, ಜನರಿಂದ ಸಮಸ್ಯೆಗಳನ್ನು ಆಲಿಸಿದರು.

ಕಣಗಾಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೈಮುನ್ನಿಸಾ, ಉಪಾಧ್ಯಕ್ಷ ರವಿ, ಸದಸ್ಯರಾದ ನಟೇಶ್, ಕುಮಾರಶೆಟ್ಟಿ, ತಹಸೀಲ್ದಾರ್ ಕುಂಜಿ ಅಹಮದ್, ಪಶು ಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಇಂಜಿನಿಯರ್ ಮಂಜುನಾಥ್, ಪಶು ವೈದ್ಯಾಧಿಕಾರಿ ಡಾ. ಚಾಮರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ ಸ್ವಾಮಿ, ರಹಮರ್‌ಜಾನ್ ಬಾಬು, ಕೆಪಿಸಿಸಿ ಸದಸ್ಯ ನಿತಿನ್ ವೆಂಕಟೇಶ್ ಸೇರಿದಂತೆ ಗ್ರಾಮದ ಮುಖಂಡರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net