

ಬೆಳಗಾವಿ: ಗೃಹಜ್ಯೋತಿ ಯೋಜನೆಗಾಗಿ ಬೆಳಗಾವಿ ಜಿಲ್ಲೆಗೆ ಸರ್ಕಾರ ಪ್ರತಿ ವರ್ಷಕ್ಕೆ 516 ಕೋಟಿ ರೂ. ನೀಡಲಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕುಟುಂಬಕ್ಕೆ ತಿಂಗಳಿಗೆ 4ರಿಂದ 5 ಸಾವಿರ ರೂ. ಖರ್ಚು ಮಾಡಲಿದೆ. ಇದು ಮಕ್ಕಳ ಶಿಣ ಹಾಗೂ ಕುಟುಂಬ ನಿರ್ವಹಣೆಗೆ ಬಳಕೆಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಶನಿವಾರ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ, ಫಲಾನುಭವಿಗಳಿಗೆ ಶೂನ್ಯ ವಿದ್ಯುತ್ ಬಿಲ್ ವಿತರಿಸಿ ಅವರು ಮಾತನಾಡಿದರು. ಚುನಾವಣೆ ವೇಳೆ ನೀಡಿದ್ದ ಗೃಹಜ್ಯೋತಿ ಯೋಜನೆ ಭರವಸೆಯನ್ನು 3 ತಿಂಗಳ ಅವಧಿಯಲ್ಲಿ ಜಾರಿಗೊಳಿಸಲಾಗುತ್ತಿದೆ. ಇನ್ನುಳಿದ ಗೃಹಲಕ್ಷಿ$್ಮ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆ ಜಾರಿಗೆ ತರಲಾಗುತ್ತಿದೆ. ಇಷ್ಟೊಂದು ದೊಡ್ಡ ಮೊತ್ತವನ್ನು ಸರ್ಕಾರ ಹೇಗೆ ಹೊಂದಾಣಿಕೆ ಮಾಡಲಿದೆ ಎಂಬ ಆತಂಕವಿತ್ತು. ಆದರೆ ಮುಖ್ಯಮಂತ್ರಿಗಳು ಇದನ್ನು ಸುಗಮವಾಗಿ ಜಾರಿಗೊಳಿಸುವ ಮೂಲಕ ನಮ್ಮ ಸರ್ಕಾರ ಬಡವರ ಪರ ಎಂಬುದನ್ನು ಸಾಬೀತುಪಡಿಸಿದ್ದಾರೆ. ಬೆಳಗಾವಿಯಲ್ಲಿ 10 ಲಕ್ಕೂ ಅಧಿಕ ಗ್ರಾಹಕರಿಗೆ ಇದರ ಪ್ರಯೋಜನೆ ದೊರಕಲಿದೆ. ಈವರೆಗೆ ಶೇ.80 ಗ್ರಾಹಕರು ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ ಎಂದರು.
ಮುಂಬರುವ ದಿನಗಳಲ್ಲಿ ಇನ್ನಷ್ಟು ಜನಪರ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಲಿದೆ. ಸರ್ಕಾರ ವಿನಿಯೋಗಿಸುವ ಇಷ್ಟು ದೊಡ್ಡ ಮೊತ್ತದ ಹಣ ಸದ್ಬಳಕೆಯಾಗಬೇಕು. ಸರ್ಕಾರದ ದುಡ್ಡು ಸಾರ್ವಜನಿಕರ ದುಡ್ಡೇ ಆಗಿರುವುದರಿಂದ ಅದನ್ನು ಇತಿಮಿತಿಯಲ್ಲಿ ಬಳಸಬೇಕು ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಗ್ಯಾರಂಟಿ ಯೋಜನೆಗಳು ಪೂರಕವಾಗಿವೆ. ಮುಂಬರುವ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜತೆಗೆ ಅಭಿವೃದ್ಧಿಯತ್ತ ದಾಪುಗಾಲು ಹಾಕೋಣ ಎಂದರು.
ಅಧ್ಯತೆ ವಹಿಸಿದ್ದ ಶಾಸಕ ಆಸೀಫ್ (ರಾಜು) ಸೇಠ್ ಮಾತನಾಡಿ, ಬಡವರ ಹಿತರಣೆಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಈ ಯೋಜನೆಯಡಿ ಸರ್ಕಾರ ಬೆಳಗಾವಿ ಜಿಲ್ಲೆಗೆ ಪ್ರತಿ ತಿಂಗಳು 45 ಕೋಟಿ ರೂ. ವೆಚ್ಚವನ್ನು ಭರಿಸಲಿದೆ ಎಂದರು.
ಹೆಸ್ಕಾಂ ಮುಖ್ಯ ಇಂಜಿನಿಯರ್ ವಿ.ಪ್ರಕಾಶ ಪ್ರಾಸ್ತಾವಿಕ ಮಾತನಾಡಿ, ರಾಜ್ಯದಲ್ಲಿ 2.20 ಕೋಟಿ ಗೃಹಬಳಕೆಯ ಗ್ರಾಹಕರಿಗೆ ಹಾಗೂ ಬೆಳಗಾವಿ ಜಿಲ್ಲೆಯ 10.65 ಲ ಗ್ರಾಹಕರಿಗೆ ಈ ಯೋಜನೆಯ ಲಾಭ ದೊರಕಲಿದೆ. ನೋಂದಣಿ ಪ್ರಕ್ರಿಯೆ ಎಲ್ಲೆಡೆ ಚುರುಕಿನಿಂದ ನಡೆದಿದ್ದು, ಅರ್ಹರಿಗೆ ಯೋಜನೆಯ ಲಾಭ ತಲುಪಿಸಲಾಗುವುದು ಎಂದರು.
ಶಾಸಕರಾದ ವಿಶ್ವಾಸ ವೈದ್ಯ, ಬಾಬಾಸಾಹೇಬ್ ಪಾಟೀಲ, ಪೃಥ್ವಿ ಕತ್ತಿ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಪಂ ಸಿಇಒ ಹರ್ಷಲ್ ಭೋಯರ್, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಹೆಸ್ಕಾಂ ಪ್ರಧಾನ ವ್ಯವಸ್ಥಾಪಕ ಸಿದ್ದು ಹುಲ್ಲೋಳಿ ಇತರರಿದ್ದರು. ಹೆಸ್ಕಾಂ ಅಧೀಕ ಇಂಜಿನಿಯರ್ ಪ್ರವಿಣಕುಮಾರ ಸ್ವಾಗತಿಸಿದರು. ಸರ್ವಮಂಗಳ ಅರಳಿಮಟ್ಟಿ ನಿರೂಪಿಸಿದರು. ಮಹಾನಗರ ಪಾಲಿಕೆ ಸದಸ್ಯರು ಸೇರಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಫಲಾನುಭವಿಗಳು ಕಾರ್ಯಕ್ರಮದಲ್ಲಿದ್ದರು.